ದೆಹಲಿ ರೈಲ್ವೆ ನಿಲ್ದಾಣದಿಂದ ಹೊರಡಬೇಕಿದ್ದ 80 ರೈಲುಗಳ ಸಂಚಾರದಲ್ಲಿ ವಿಳಂಬವಾಗಿವೆ. ಅಲ್ಲದೇ 20 ರೈಲುಗಳ ವೇಳಾಪಟ್ಟಿಯನ್ನು ಬದಲಿಸಲಾಗಿದೆ.
ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ದಟ್ಟ ಮಂಚ್ಜು ಹಾಗೂ ಶೀತಗಾಳಿ ಮುಂದುವರೆದಿದೆ. ಚಳಿಯಿಂದಾಗಿ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಮಧ್ಯೆ ದಟ್ಟನೆಯ ಮಂಜು ಕವಿದಿರುವ ಹಿನ್ನಲೆಯಲ್ಲಿ ದೆಹಲಿಯಲ್ಲಿ 80 ರೈಲು ಹಾಗೂ ವಿಮಾನ ಸಂಚಾರಕ್ಕೆ ತೀವ್ರ ಅಡ್ಡಿಯುಂಟಾಗಿದೆ. ದೆಹಲಿ ರೈಲ್ವೆ ನಿಲ್ದಾಣದಿಂದ ಹೊರಡಬೇಕಿದ್ದ 80 ರೈಲುಗಳ ಸಂಚಾರದಲ್ಲಿ ವಿಳಂಬವಾಗಿವೆ. ಅಲ್ಲದೇ 20 ರೈಲುಗಳ ವೇಳಾಪಟ್ಟಿಯನ್ನು ಬದಲಿಸಲಾಗಿದೆ. ಹೀಗಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ದೆಹಲಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಷಿಯಸ್ ದಾಖಲಾಗಿದೆ. ಇದು ಸರಾಸರಿಗಿಂತ ನಾಲ್ಕು ಅಂಕ ಹೆಚ್ಚು. ಕನಿಷ್ಠ ತಾಪಮಾನ 11.5 ಡಿಗ್ರಿ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಪ್ರಕಟನೆ ತಿಳಿಸಿದೆ. ಅಷ್ಟೇ ಅಲ್ಲದೆ ಡಿಸೆಂಬರ್ 17ರಿಂದ ಜನವರಿ 15ರವೆರೆಗಿನ ಹೊಸ ರೈಲುಗಳ ಸಂಚಾರವನ್ನು ರದ್ದು ಪಡಿಸಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ.
