ಕೊಚ್ಚಿ: ಇಲ್ಲಿನ ಕಾಲೇಜು ವಿದ್ಯಾರ್ಥಿಯೊಬ್ಬನಿಗೆ ಶಂಕಿತ ನಿಫಾ ವೈರಸ್ ಇರುವುದು ಪತ್ತೆಯಾಗಿದೆ ಎಂದು ಕೇರಳ ಸರ್ಕಾರ  ತಿಳಿಸಿದೆ. 

ಸೋಂಕು ತಗಲಿರುವ ಶಂಕೆಯ ಹಿನ್ನೆಲೆಯಲ್ಲಿ 23 ವರ್ಷದ ವಿದ್ಯಾರ್ಥಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಪ್ರತ್ಯೇಕ ಕೋಣೆಯಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ತಗಲಿರುವು ದನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಗೆ ರಕ್ತದ ಮಾದರಿಗಳನ್ನು ಕಳುಹಿಸಿಕೊಡಲಾಗಿದೆ.

ಇದೇ ವೇಳೆ ನಿಫಾ ಸೋಂಕು ಎದುರಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ, ತಜ್ಞರ ತಂಡ ರಚಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.