ಚಿಂತಾಮಣಿ ನಗರಸಭೆ ಆಯುಕ್ತ ಮುನಿಶಾಮಿ ಅವರು ತಮ್ಮ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆಂದು ದೂರು ನೀಡಲಾಗಿತ್ತು.

ಚಿಂತಾಮಣಿ(ಆ.29): ಲೈಂಗಿಕ ಕಿರುಕುಳ ಆರೋಪದ ಮೇಲೆ ಚಿಂತಾಮಣಿ ನಗರಸಭೆ ಆಯುಕ್ತರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ದೀಪ್ತಿ ಆದಿತ್ಯಾ ಕಾನಡೆ ಆದೇಶ ಹೊರಡಿಸಿದ್ದಾರೆ.

ಚಿಂತಾಮಣಿ ನಗರಸಭೆ ಆಯುಕ್ತ ಮುನಿಶಾಮಿ ಅವರು ತಮ್ಮ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆಂದು ದೂರು ನೀಡಲಾಗಿತ್ತು.ಈ ದೂರಿನ ಅನ್ವಯ ವಿಚಾರಣೆ ನಡೆಸಿದ ಜಿಲ್ಲಾಧಿಕಾರಿ ದೀಪ್ತಿ ಆದಿತ್ಯಾ ಕಾನಡೆ ಅವರು ಆಯುಕ್ತ ಮುನಿಶಾಮಿ ಅವರನ್ನು ಅಮಾನತುಗೊಳಿಸಿ ಆದೇಶ ನೀಡಿದ್ದಾರೆ. ಅಲ್ಲದೇ ಮುನಿಶಾಮಿ ಅವರನ್ನು ರೇಷ್ಮೆ ಇಲಾಖೆಗೆ ವರ್ಗಾಯಿಸಲಾಗಿದ್ದು, ಜಿಲ್ಲಾ ಯೋಜನಾ ನಿರ್ಧೇಶಕರಾದ ಎನ್ ಬಾಸ್ಕರ್ ಅವರನ್ನು ಚಿಂತಾಮಣಿಯ ಪ್ರಭಾರ ಆಯುಕ್ತರನ್ನಾಗಿ ನೇಮಿಸಿದ್ದಾರೆ.

(ಸಾಂಧರ್ಭಿಕ ಚಿತ್ರ)