38 ಬಿಜೆಪಿ ಮುಖಂಡರ ವಿರುದ್ಧ ದೂರು ದಾಖಲು

First Published 30, May 2018, 9:47 AM IST
Complaint Against 38 BJP Leaders
Highlights

ಸಾಲಮನ್ನಾಗೆ ಆಗ್ರಹಿಸಿ ನಡೆಸಿದ ಬಂದ್ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೇ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಕೊಪ್ಪಳ ಸಂಸದ ಕರಡಿ ಸಂಗಣ್ಣ, ಮುಖಂಡ ಅಮರೇಶ ಕರಡಿ, ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಸಿ.ವಿ. ಚಂದ್ರಶೇಖರ ಸೇರಿದಂತೆ ಒಟ್ಟು 38 ಜನರ ವಿರುದ್ಧ ಮಂಗಳವಾರ ದೂರು ದಾಖಲಾಗಿದೆ. 

ಕೊಪ್ಪಳ : ಸಾಲಮನ್ನಾಗೆ ಆಗ್ರಹಿಸಿ ನಡೆಸಿದ ಬಂದ್ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೇ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಕೊಪ್ಪಳ ಸಂಸದ ಕರಡಿ ಸಂಗಣ್ಣ, ಮುಖಂಡ ಅಮರೇಶ ಕರಡಿ, ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಸಿ.ವಿ. ಚಂದ್ರಶೇಖರ ಸೇರಿದಂತೆ ಒಟ್ಟು 38 ಜನರ ವಿರುದ್ಧ ಮಂಗಳವಾರ ದೂರು ದಾಖಲಾಗಿದೆ. 

ಪಿಐ ರವಿ ಉಕ್ಕುಂದ ದೂರಿನ ನ್ವಯ ಠಾಣೆಯಲ್ಲಿ ದೂರು ದಾಖಲಾಗಿದೆ. ಅನುಮತಿ ಯಿಲ್ಲದೇ ಮೈಕ್, ಆಟೋವನ್ನು ಬಳಸಿರುವುದನ್ನು ಪ್ರಶ್ನಿಸಿದ್ದಕ್ಕೆ ಡಿವೈಎಸ್‌ಪಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾರೆ.

loader