ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಕೆ.ಜಿ. ಬೋಪಯ್ಯ ಕಳೆದ ಶನಿವಾರ ವಿಧಾನಸಭೆಯಲ್ಲಿ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ನ್ಯಾಯವಾದಿಯೊಬ್ಬರು ದೂರು ದಾಖಲಿಸಿದ್ದಾರೆ.
ಲಖನೌ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಕೆ.ಜಿ. ಬೋಪಯ್ಯ ಕಳೆದ ಶನಿವಾರ ವಿಧಾನಸಭೆಯಲ್ಲಿ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ನ್ಯಾಯವಾದಿಯೊಬ್ಬರು ದೂರು ದಾಖಲಿಸಿದ್ದಾರೆ.
ವಿಧಾನಸಭೆಯಲ್ಲಿ ರಾಷ್ಟ್ರಗೀತೆ ನುಡಿಸುತ್ತಿದ್ದರೂ ಬಿಜೆಪಿ ಮುಖಂಡರಾದ ಯಡಿಯೂರಪ್ಪ ಮತ್ತು ಬೋಪಯ್ಯ ಸದನದಿಂದ ಹೊರ ನಡೆದಿದ್ದಾರೆ.
ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಳಿಕ ವಿಧಾನಸಭೆಯಿಂದ ಹೊರ ನಡೆದಿದ್ದರು ಎಂದು ನ್ಯಾಯವಾದಿ ಜ್ಞಾನಪ್ರಕಾಶ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಕುಂಡಾನ್ಯಾಯಾಲಯ ದೂರು ಸ್ವೀಕರಿಸಿದ್ದು, ಮುಂದಿನ ವಿಚಾರಣೆ ಮೇ 29ಕ್ಕೆ ನಿಗದಿಪಡಿಸಲಾಗಿದೆ.
