ಕರಾವಳಿಯಲ್ಲಿ ನಡೆಯುತ್ತಿದ್ದ ಕೋಮು ಉದ್ವಿಗ್ನತೆ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ  ಹನುಮೆಗೌಡ ಎಂಬವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.

Add Asianetnews Kannada as a Preferred SourcegooglePreferred

ಬೆಂಗಳೂರು: ಕರಾವಳಿಯಲ್ಲಿ ನಡೆಯುತ್ತಿದ್ದ ಕೋಮು ಉದ್ವಿಗ್ನತೆ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಹನುಮೆಗೌಡ ಎಂಬವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.

ಕಾಮಾಕ್ಷಿಪಾಳ್ಯದ ಹನುಮೆಗೌಡ ಎಂಬವರು ಶನಿವಾರ ದೂರು ನೀಡಿದ್ದು,ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಪೊಲೀಸರು ಬಂಧಿಸಿದರೆ ರಾಜ್ಯವೇ ಬೆಂಕಿ ಹೊತ್ತಿ ಉರಿಯುತ್ತದೆ ಎಂದು ಯಡಿಯೂರಪ್ಪ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಗಂಭೀರವಾಗಿ ಪರಿಗಣಿಸಿ ಕಾನೂ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.