ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ನಡೆಯುತ್ತಿದೆ ಭಾರೀ ಪಿತೂರಿ

Complaint Against Hassan DC Rohini Sindhuri
Highlights

ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿದ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಚಿವ .ಮಂಜು ತಮ್ಮ ರಾಜಕೀಯ ನಡೆಸುತ್ತಿದ್ದಾರೆ. ತಮ್ಮ ಹಿಂಬಾಲಕರ ಮೂಲಕ ನಿರಂತರವಾಗಿ ಹೇಳಿಕೆ ನೀಡಿಸಲಾಗುತ್ತಿದೆ.

ಹಾಸನ : ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿದ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಚಿವ .ಮಂಜು ತಮ್ಮ ರಾಜಕೀಯ ನಡೆಸುತ್ತಿದ್ದಾರೆ. ತಮ್ಮ ಹಿಂಬಾಲಕರ ಮೂಲಕ ನಿರಂತರವಾಗಿ ಹೇಳಿಕೆ ನೀಡಿಸಲಾಗುತ್ತಿದೆ.

ನಿನ್ನೆ  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಸಿಂಧೂರಿ ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದರು. ಇಂದು  ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತಾ ದೇವರಾಜ್ ಸಹ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಸಚಿವರು ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ ಎಂದಿರುವ ಅವರು ಜಿಲ್ಲಾಧಿಕಾರಿ ಜೆಡಿಎಸ್ ಪರ ಪಕ್ಷಪಾತ ಆಡಳಿತ ನಡೆಸುತ್ತಿದ್ದಾರೆ ಎಂದು ದೂರಿದ್ದಾರೆ.

ಅಲ್ಲದೇ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು  ಬದಲಾವಣೆ ಮಾಡುವಂತೆ ಆಗ್ರಹ ಕೇಳಿ ಬಂದಿದ್ದು, ರಾಜ್ಯ ಚುನಾವಣಾ ಆಯೋಗ ಹಾಗೂ ಮುಖ್ಯ ಕಾರ್ಯದರ್ಶಿಗೆ  ದೂರು ನೀಡಲಾಗಿದೆ.

loader