ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಮಂಗಳವಾರ ನಡೆದ ‘ನಾನು ಗೌರಿ’ ಪ್ರತಿರೋಧ ಸಮಾವೇಶದಲ್ಲಿ ಪ್ರಧಾನಿ ಮೋದಿ ಹಾಗೂ ಅವರ ತಾಯಿ ಬಗ್ಗೆ ಕೀಳು ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಗುಜರಾತ್‌ನ ಸಾಮಾಜಿಕ ಹೋರಾಟಗಾರ ಜಿಗ್ನೇಶ್ ಮೇವಾನಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಾಗಿದೆ.
ಪುತ್ತೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಮಂಗಳವಾರ ನಡೆದ ‘ನಾನು ಗೌರಿ’ ಪ್ರತಿರೋಧ ಸಮಾವೇಶದಲ್ಲಿ ಪ್ರಧಾನಿ ಮೋದಿ ಹಾಗೂ ಅವರ ತಾಯಿ ಬಗ್ಗೆ ಕೀಳು ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಗುಜರಾತ್ನ ಸಾಮಾಜಿಕ ಹೋರಾಟಗಾರ ಜಿಗ್ನೇಶ್ ಮೇವಾನಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಾಗಿದೆ.
ಗೌರಿ ಹತ್ಯೆಗೆ ಪ್ರಧಾನಿ ಮೋದಿ ಕಾರಣ ಎಂಬರ್ಥದಲ್ಲಿ ಜಿಗ್ನೇಶ್ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಮೋದಿ ತಾಯಿ ಬಗ್ಗೆ ಕೀಳಾಗಿ ಮಾತಾಡಿದ್ದಾರೆ. ಹೀಗಾಗಿ ಜಿಗ್ನೇಶ್ ಅವರನ್ನು ಬಂಧಿಸಿ ಸೂಕ್ತ ಕಾನೂನಿನಡಿ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಎಂಬವರು ದೂರು ದಾಖಲಿಸಿದ್ದಾರೆ.
‘ಮೋದಿಯೊಬ್ಬ ನೀಚ ಮನಸ್ಸಿನ ನಾಯಕ. ಇಂತಹ ಮಗನಿಗೆ ಏಕೆ ಜನ್ಮ ನೀಡಿದ್ದೀರಿ ಎಂದು ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಬಳಿ ಪ್ರಶ್ನಿಸೋಣ’ ಎಂದು ಜಿಗ್ನೇಶ್ ಹೇಳಿದ್ದರು.
