ಹಾಸನ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.

ಹಾಸನ : ಹಾಸನ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.

Add Asianetnews Kannada as a Preferred SourcegooglePreferred

ಈ ದೂರಿನಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿ ಬೇರೊಬ್ಬರ ನೇಮಕ ಮಾಡಬೇಕು ಎಂದು ಮನವಿ ಮಾಡಲಾಗಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಾವಗಲ್ ಮಂಜುನಾಥ್ ಸಿಂಧೂರಿ ವಿರುದ್ಧ ದೂರು ನೀಡಿದ್ದಾರೆ.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವುದಿಲ್ಲ. ವರ್ಗಾವಣೆ ವಿವಾದದಲ್ಲಿ ಬೆಂಬಲಕ್ಕೆ ನಿಂತಿದ್ದ ಜೆಡಿಎಸ್ ಹಾಗೂ ಬಿಜೆಪಿ ಪರ ವಹಿಸುವ ಸಾಧ್ಯತೆ ಇದೆ ಎಂದು ಆರೋಪ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಅವರನ್ನು ವರ್ಗಾವಣೆ ಮಾಡಬೇಕು ಎಂದು ದೂರಿನಲ್ಲಿ ಜಾವಗಲ್ ಮಂಜುನಾಥ್ ತಿಳಿಸಿದ್ದಾರೆ.