ಹಾಸನದಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ   ಎ.ಮಂಜು  ಸಮರ ಇದೀಗ ತಾರಕಕ್ಕೇರಿದೆ. 

ಹಾಸನ :  ಹಾಸನದಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎ.ಮಂಜು ಸಮರ ಇದೀಗ ತಾರಕಕ್ಕೇರಿದೆ. 

ಡಿಸಿ ಸಿಂಧೂರಿ ವಿರುದ್ಧ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಝಾ‌ಗೆ ಪತ್ರ ಬರೆದು ದೂರು ನೀಡಿದ್ದಾರೆ.

ಒಟ್ಟು 6 ಪುಟಗಳ ಸುದೀರ್ಘ ಪತ್ರ ಬರೆದಿರುವ ಸಚಿವ ಎ.ಮಂಜು, ನಾನು‌ ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ. ಆದರೂ ಕೂಡ ಎಫ್ ಐ ಆರ್ ದಾಖಲಿಸಲಾಗಿದೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

 ಡಿಸಿ ರೋಹಿಣಿ ಸಿಂಧೂರಿ‌ ಅವರು ದುರುದ್ದೇಶದ ನಡೆಯಿಂದ ತಮಗೆ ನೋವಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಅಲ್ಲದೇ ಜಿಲ್ಲಾ ಚುನಾವಣಾಧಿಕಾರಿ ಬದಲಿಸುವಂತೆ ಪತ್ರದಲ್ಲಿ ಉಲ್ಲೇಖ ಮಾಡಿದ್ದು, ಡಿಸಿ ವಿರುದ್ಧ ನಿರಂತವಾಗಿ ಚುನಾವಣಾ ಆಯೋಗಕ್ಕೆ ದೂರು ನೀಡುತ್ತಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಜಿಪಂ ಅಧ್ಯಕ್ಷೆ ಶ್ವೇತಾ ಸಹ ಡಿಸಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.