ಭಾರತೀಯ ಸಂವಿಧಾನದ ಕುರಿತು ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಶ್ರೀಗಳ ಹೇಳಿಕೆ ಖಂಡಿಸಿ ಬೆಂಗಳೂರು ವಿವಿಯ ಸಂಶೋದನಾ ವಿಭಾಗದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.  ಮೈಸೂರು ರಸ್ತೆಯಲ್ಲಿ ಬೆಂಕಿ ಹಚ್ಚಿ ಪೇಜಾವರ ಶ್ರೀ ಗಳು ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು (ನ.26): ಭಾರತೀಯ ಸಂವಿಧಾನದ ಕುರಿತು ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಶ್ರೀಗಳ ಹೇಳಿಕೆ ಖಂಡಿಸಿ ಬೆಂಗಳೂರು ವಿವಿಯ ಸಂಶೋದನಾ ವಿಭಾಗದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಮೈಸೂರು ರಸ್ತೆಯಲ್ಲಿ ಬೆಂಕಿ ಹಚ್ಚಿ ಪೇಜಾವರ ಶ್ರೀ ಗಳು ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Add Asianetnews Kannada as a Preferred SourcegooglePreferred

ಉಡುಪಿಯಲ್ಲಿ ನಡೆಯುತ್ತಿರುವ ಧರ್ಮ ಸಂಸದ್​ನಲ್ಲಿ ನಿನ್ನೆ ಪೇಜಾವರ ಶ್ರೀಗಳು ಸಂವಿಧಾನ ತಿದ್ದುಪಡಿ ಬಗ್ಗೆ ಮಾತನಾಡಿದ್ದರು. ಭಾರತೀಯ ಸಂವಿಧಾನ ಅಂಬೇಡ್ಕರ್ ಒಬ್ಬರೇ ಮಾಡಿದ್ದಲ್ಲ. ಅದನ್ನು ಬದಲಾಯಿಸಿದರೆ ಏನು ತಪ್ಪಿಲ್ಲ ಎಂದು ಹೇಳಿಕೆ ನೀಡಿದ್ದರು. ಇದು ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ಈ ಸಂಬಂಧ ಜ್ಞಾನಭಾರತೀ ಪೊಲೀಸ್ ಠಾಣೆಯಲ್ಲಿ ಪೇಜಾವರ ಶ್ರೀ ವಿರುದ್ಧ ದೂರನ್ನು ದಾಖಲಿಸಿದ್ದಾರೆ.