ದೀಪಕ್ ಹತ್ಯೆ ಪ್ರಕರಣದಲ್ಲಿ ಬಿಜೆಪಿ  ಕಾರ್ಪೊರೇಟರ್ ಕೈವಾಡ ಎಂದಿದ್ದಕ್ಕೆ ಎಚ್ ಡಿ ಕುಮಾರಸ್ವಾಮಿ  ವಿರುದ್ಧ ದೂರು ದಾಖಲಾಗಿದೆ.

ಬೆಂಗಳೂರು (ಜ.09): ದೀಪಕ್ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಕಾರ್ಪೊರೇಟರ್ ಕೈವಾಡ ಎಂದಿದ್ದಕ್ಕೆ ಎಚ್ ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿದೆ.

ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಡಾ.ವೈ.ಭರತ್ ಶೆಟ್ಟಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಅರ್ಜಿ ಸಲ್ಲಿಸಿದ್ದಾರೆ.

ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಕಾರ್ಪೋರೇಟರ್ ಕೈವಾಡವಿದೆ ಎಂದು ನಿನ್ನೆ ಮೈಸೂರಿನಲ್ಲಿ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದರು. ಇದಕ್ಕೆ ಬಿಜೆಪಿ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

ಮಂಗಳೂರಿನಲ್ಲಿ ಬಿಜೆಪಿ ಉತ್ತರ ಕ್ಷೇತ್ರಾಧ್ಯಕ್ಷ ವೈ.ಭರತ್ ಶೆಟ್ಟಿ ಪತ್ರಿಕಾಗೋಷ್ಠಿ ನಡೆಸಿ, ದೀಪಕ್ ಕೇಸ್'ನಲ್ಲಿ ಎಚ್.ಡಿ.ಕುಮಾರಸ್ವಾಮಿ ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ. ಹತ್ಯೆಯಲ್ಲಿ ಬಿಜೆಪಿ ಕಾರ್ಪೋರೇಟರ್ ಕೈವಾಡವಿದೆ ಅಂತ ಆರೋಪಿಸಿದ್ದಾರೆ. ಹೀಗಾಗಿ ಬಿಜೆಪಿ ಇವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದೆ. ಕುಮಾರಸ್ವಾಮಿ ವಿರುದ್ದ ಒಂದು ಕೋಟಿ ರೂ.ಮಾನನಷ್ಟ ಮೊಕದ್ದಮೆ ಹೂಡಿದ್ದೇವೆ. ಇದಕ್ಕೆ ಬೇಕಾದ ಎಲ್ಲಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಈ ಮೊಕದ್ದಮೆಯನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ. ಈ ಕೇಸನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದಿದ್ದಾರೆ.