ಬೆಂಗಳೂರು :  ಮಾಜಿ ಸಂಸದೆಯೂ ಆಗಿರುವ ನಟಿ ರಮ್ಯಾ ಅವರ ಘನತೆಗೆ ಧಕ್ಕೆ ತರುವ ರೀತಿಯಲ್ಲಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದ ಆರೋಪಿ ವಿರುದ್ಧ ಸೈಬರ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ರಮ್ಯಾ ಪರ ವಕೀಲೆ ಎಚ್‌.ವಿ.ಭವ್ಯ ಅನು ಎಂಬುವರು ನೀಡಿದ ದೂರಿನ ಮೇರೆಗೆ ನವೀನ್‌ ಸಾಗರ್‌ ಎಂಬಾತನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ರಮ್ಯಾ ಅವರ ಅಭಿನಯಿಸಿದ್ದ ಚಿತ್ರವೊಂದರ ಫೋಟೋವನ್ನು ವಿಕೃತವಾಗಿ ಬಿಂಬಿಸಿ, ಅಶ್ಲೀಲ ಪದ ಬಳಸಿ ನವೀನ್‌ ಸಾಗರ್‌ ಪೋಸ್ಟ್‌ ಮಾಡುವ ಮೂಲಕ ರಮ್ಯಾ ಅವರ ಘನತೆಗೆ ಧಕ್ಕೆ ತರುವ ರೀತಿ ನಡೆದುಕೊಂಡಿರುವುದಾಗಿ ಆರೋಪಿ ವಿರುದ್ಧ ದೂರು ನೀಡಿದ್ದಾರೆ.

ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪದಡಿ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಸೈಬರ್‌ ಕ್ರೈಂ ಪೊಲೀಸರು ಹೇಳಿದರು.