ಬಸ್ ನಿಲ್ದಾಣದಲ್ಲಿ ಜಾಹೀರಾತು ಅಳವಡಿಕೆ ಮಾಡುವ ಮುನ್ನ ಬಿಬಿಎಂಪಿ ಕೌನ್ಸಿಲ್ ಸಭೆಯಿಂದ ಅನುಮತಿ ಪಡೆಯಬೇಕಿತ್ತು. ಯಾವುದೇ ಪರವಾನಿಗೆ ಪಡೆಯದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಸಾಧನೆ ಕುರಿತ ಜಾಹೀರಾತು ಬಸ್ ತಂಗುದಾಣದಲ್ಲಿ ಹಾಕಿದ್ದಾರೆ.

ಬೆಂಗಳೂರು(ಜೂ.20): ಜಾಹೀರಾತು ಶುಲ್ಕ ವಂಚನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಮತ್ತು ಭ್ರಷ್ಟಾಚಾರ ನಿಗ್ರಹದಳದಲ್ಲಿ ದೂರು ದಾಖಲಾಗಿದೆ. ನಗರದ 439 ಬಿಬಿಎಂಪಿ ಬಸ್ ತಂಗುದಾಣದಲ್ಲಿ ಜಾಹೀರಾತು ಅಳವಡಿಕೆಯಲ್ಲಿ 68.15 ಕೋಟಿ ಅಕ್ರಮ ನಡೆಸಿರುವ ಆರೋಪ ಕೇಳಿಬಂದಿದೆ. ಕಳೆದ ಎರಡು ವರ್ಷಗಳಿಂದ 34.07 ಕೋಟಿ ರೂ. ನಂತೆ ರಾಜ್ಯ ಸರ್ಕಾರದ ಸಾಧನೆ ಹಾಗೂ ಯೋಜನೆಗಳನ್ನು ಬಸ್ ಶೆಲ್ಟರ್ ಗಳ ಮೂಲಕ ದುರ್ಬಳಕೆ ಮಾಡಿಕೊಂಡಿದೆ. ಬಸ್ ನಿಲ್ದಾಣದಲ್ಲಿ ಜಾಹೀರಾತು ಅಳವಡಿಕೆ ಮಾಡುವ ಮುನ್ನ ಬಿಬಿಎಂಪಿ ಕೌನ್ಸಿಲ್ ಸಭೆಯಿಂದ ಅನುಮತಿ ಪಡೆಯಬೇಕಿತ್ತು. ಯಾವುದೇ ಪರವಾನಿಗೆ ಪಡೆಯದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಸಾಧನೆ ಕುರಿತ ಜಾಹೀರಾತು ಬಸ್ ತಂಗುದಾಣದಲ್ಲಿ ಹಾಕಿದ್ದಾರೆ. ಈ ಸಂಬಂಧ ಲೋಕಾಯುಕ್ತದಲ್ಲಿ ಸಿಎಂ ವಿರುದ್ಧ ದೂರು ದಾಖಲು ಮಾಡಿರುವುದಾಗಿ ಬಿಜೆಪಿ ಬೆಂಗಳೂರು ನಗರ ಜಿಲ್ಲಾ ಘಟಕದ ವಕ್ತಾರ ಎನ್ .ಆರ್ .ರಮೇಶ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಜಾಹೀರಾತು ಶುಲ್ಕ ವಸೂಲಿ ಮಾಡಲು ಪಾಲಿಕೆ ಆಯುಕ್ತರು ಮತ್ತು ಅಧಿಕಾರಿಗಳಿಗೆ ಧೈರ್ಯ ಮಾಡುತ್ತಿಲ್ಲ. ಈ ಸಂಬಂಧ ನಗರ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ , ಸರ್ಕಾರದ ಮುಖ್ಯ ಕಾರ್ಯದರ್ಶಿ, ವಾರ್ತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ವಿರುದ್ಧ ಲೋಕಾಯುಕ್ತ ಮತ್ತು ಎಸಿಬಿಯಲ್ಲಿ ದೂರು ದಾಖಲಿಸಿರುವುದಾಗಿ ತಿಳಿಸಿದ್ದಾರೆ.