ಸಾಲ ಕೊಟ್ಟು ಮತಯಾಚನೆ : ಶಾಸಕನ ವಿರುದ್ಧ ದೂರು

Compliant Against Madhugiri MLA
Highlights

ಸಾಲ ತೆಗೆದುಕೊಂಡ ರೈತರಿಗೆ ಕಾಂಗ್ರೆಸ್ಸಿಗೆ ಮತ ಹಾಕುವಂತೆ ಬ್ಯಾಂಕ್‌ನ ಸಿಬ್ಬಂದಿ ಮೂಲಕ ಹೇಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ತುಮಕೂರು: ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಧುಗಿರಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ವಿರುದ್ಧ ಮಧುಗಿರಿಯ ರವಿಕುಮಾರ್ ಎಂಬುವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ರಾಜಣ್ಣ ಸಾಲದ ರೂಪದಲ್ಲಿ ಮತದಾರರಿಗೆ ಆಮಿಷ ಒಡ್ಡುತ್ತಿದ್ದಾರೆ. ಸಾಲ ತೆಗೆದುಕೊಂಡ ರೈತರಿಗೆ ಕಾಂಗ್ರೆಸ್ಸಿಗೆ ಮತ ಹಾಕುವಂತೆ ಬ್ಯಾಂಕ್‌ನ ಸಿಬ್ಬಂದಿ ಮೂಲಕ ಹೇಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸಾಲ ಮೇಳದಲ್ಲಿ ಸಾಲ ಪಡೆದವರು ಕಾಂಗ್ರೆಸ್‌ಗೆ ಮತ ಹಾಕದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಬೆದರಿಕೆಯೊಡ್ಡಿದ್ದಾರೆಂದು ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಬ್ಯಾಂಕಿಗೆ ನೋಟಿಸ್ ಕೊಟ್ಟಿದ್ದಾರೆ.

loader