ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಚಟುವಟಿಕೆಗಳಲ್ಲಿ ಜಮೀರ್ ಹಸ್ತಕ್ಷೇಪ ಮಾಡಿದ್ದಾರೆಂದು ಚಾಮರಾಜಪೇಟೆ ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಬೆಂಗಳೂರು(ಮೇ.17): ಜೆಡಿಎಸ್ ಭಿನ್ನಮತೀಯ ಶಾಸಕ ಜಮೀರ್ ಅಹಮದ್ ವಿರುದ್ಧ ಕೆಪಿಸಿಸಿಗೆ ದೂರು ನೀಡಲಾಗಿದೆ. ಕಾಂಗ್ರೆಸ್ ಸೇರೋ ಮುನ್ನ ಜಮೀರ್ಗೆ ಸಂಕಷ್ಟ ಎದುರಾಗಿದೆ. ಜಮೀರ್ ಅಹಮದ್ ಜೆಡಿಎಸ್ ಶಾಸಕರಾಗಿದ್ದುಕೊಂಡೇ ಕಾಂಗ್ರೆಸ್ ಚಟುವಟಿಕೆಗಳಲ್ಲಿ ಮೂಗು ತೂರಿಸುತ್ತಿದ್ದಾರೆಂದು ಆರೋಪಿಸಲಾಗಿದೆ. ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಚಟುವಟಿಕೆಗಳಲ್ಲಿ ಜಮೀರ್ ಹಸ್ತಕ್ಷೇಪ ಮಾಡಿದ್ದಾರೆಂದು ಚಾಮರಾಜಪೇಟೆ ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಕಾಂಗ್ರೆಸ್ ಸೇರ್ಪಡೆಯಾಗದೇ ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿರುವುದಕ್ಕೆ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ ಕೆಪಿಸಿಸಿಗೆ ದೂರು ಸಲ್ಲಿಸಿದ್ದಾರೆ.
