ಬಿಬಿಎಂಪಿ ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ಮತ್ತು ಅವರ ಪುತ್ರ ಲಿತೇಶ್ ರೆಡ್ಡಿ ಅವರು ಅವಾಚ್ಯ ಶಬ್ಧಗಳಿಂದ ನಿಂದಿಸಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಹರಿನಾಥ್ ಎಂಬುವರು ದೂರು ನೀಡಿದ್ದಾರೆ
ಬೆಂಗಳೂರು(ಆ.19): ಬಿಬಿಎಂಪಿ ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ಮತ್ತು ಅವರ ಪುತ್ರ ಲಿತೇಶ್ ರೆಡ್ಡಿ ವಿರುದ್ಧ ವ್ಯಕ್ತಿಯೊಬ್ಬರು ಮಡಿವಾಳ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಿಸಿದ್ದಾರೆ. ಮಡಿವಾಳ ನಿವಾಸಿ ಹರಿನಾಥ್ ದೂರು ನೀಡಿದವರು. ಬಿಬಿಎಂಪಿ ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ಮತ್ತು ಅವರ ಪುತ್ರ ಲಿತೇಶ್ ರೆಡ್ಡಿ ಅವರು ಅವಾಚ್ಯ ಶಬ್ಧಗಳಿಂದ ನಿಂದಿಸಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಹರಿನಾಥ್ ಎಂಬುವರು ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾನು ಹಲವು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿದ್ದೇನೆ. ಆ.15ರ ಬೆಳಗ್ಗೆ 4 ಗಂಟೆಗೆ ಸುಮಾರಿಗೆ ಮಡಿವಾಳ ಅಂಚೆ ಕಚೇರಿ ರಸ್ತೆ ನಿವಾಸಿ ನರೇಶ್ ಅವರು ಕರೆ ಮಾಡಿ, ಭಾರಿ ಮಳೆಯಿಂದಾಗಿ ತಮ್ಮ ಮನೆಗೆ ನೀರು ನುಗ್ಗಿರುವುದಾಗಿ ತಿಳಿಸಿದರು. ಈ ಬಗ್ಗೆ ಬಿಬಿಎಂಪಿಗೆ ಹಾಗೂ ಜಲಮಂಡಳಿಗೆ ತಿಳಿಸಿದ್ದರು ಯಾವುದೇ ಪ್ರಯೋಜವಾಗಿಲ್ಲ. ಹೀಗಾಗಿ ಸ್ವತಃ ನಾನೇ ಸ್ಥಳಕ್ಕೆ ಹೋಗಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದೆ. ಈ ವೇಳೆ ಸ್ಥಳಕ್ಕೆ ಬಂದ ಮಂಜುನಾಥ್ ರೆಡ್ಡಿ ಮತ್ತು ಅವರ ಪುತ್ರ ನಮ್ಮ ಏರಿಯಾಗೆ ಏಕೆ ಬಂದಿದ್ದೀಯಾ? ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದರು ಎಂದು ಉಲ್ಲೇಖಿಸಿದ್ದಾರೆ
