ಇಂದು ಬೆಳಗ್ಗೆ ಕಾನ್ಫಿಡೆಂಟ್ ಗ್ರೂಪ್‌ಗೆ ಸಂಬಂಧಿಸಿದ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದರು. ಮಧ್ಯಾಹ್ನ ವೇಳೆಗೆ ಕಚೇರಿಗೆ ಆಗಮಿಸಿದ್ದ ಸಿಜೆ ರಾಯ್ ಅವರು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಐಟಿ ಅಧಿಕಾರಿಗಳಿಂದ ವಿಚಾರಣೆಗೆ ಒಳಗಾಗಿದ್ದಾರೆ. ಬಳಿಕ ಏನಾಯ್ತು?

ಕಾನ್ಫಿಡೆಂಟ್ ಗ್ರೂಫ್ (Confident Group) ಮಾಲೀಕರು ಹಾಗೂ ಚೇರ್ಮನ್ ಸಿಜೆ ರಾಯ್ ಅವರು ಐಟಿ ರೈಡ್ ಆಗಿರೋ ಕಾರಣಕ್ಕೆ ಬೇಸತ್ತು

ಸಾವಿಗೆ ಶರಣಾಗಿರುವುದು ಗೊತ್ತೇ ಇದೆ. ಯಾಕೆ ಅವರು ಸಾವಿಗೆ ಮೊರೆ ಹೋಗಿದ್ದು? ಅಂಥದ್ದು ಏನಾಗಿತ್ತು. ಎಲ್ಲಾ ಮಾಹಿತಿಗಾಗಿ ಈ ಸ್ಟೋರಿ ನೋಡಿ..

ಬೆಂಗಳೂರಿನಲ್ಲಿ ಎಲ್ಲಿದೆ ಸಿಜೆ ರಾಯ್ ಆಫೀಸ್?

Confident Group Chairman CJ Roy Death: ಹೌದು, ಕೇರಳ ಮೂಲದ ಉದ್ಯಮಿ ಸಿಜೆ ರಾಯ್ ಅವರ ಕಚೇರಿ ಬೆಂಗಳೂರು ನಗರದ ಹೊಸೂರು ರಸ್ತೆಯ ಲ್ಯಾಂಗ್‌ಫೋರ್ಡ್‌ ರಸ್ತೆಯಲ್ಲಿ ಇದೆ. ಅಲ್ಲಿ ಅನೇಕ ವರ್ಷಗಳಿಂದ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ. ಕಾರಣ, ಉದ್ಯಮಿ ಸಿಜೆ ರಾಯ್ ಅವರು ಆದಾಯಕ್ಕೆ ಮೀರಿದ ಗಳಿಕೆ ಅನುಭವಿಸುತ್ತಿರುವುದು ಎನ್ನಲಾಗಿದೆ.

ಇಂದು ಬೆಳಿಗ್ಗೆಯಿಂದ ಏನೇನಾಯ್ತು?

ಬೆಂಗಳೂರು ನಗರದ ಹೊಸೂರು ರಸ್ತೆಯ ಲ್ಯಾಂಗ್‌ಫೋರ್ಡ್‌ ರಸ್ತೆಯಲ್ಲಿ ಗುರುವಾರ (ಜನವರಿ 30-2026) ಆತಂಕಕಾರಿ ಘಟನೆ ಸಂಭವಿಸಿದೆ. ಖ್ಯಾತ ಉದ್ಯಮ ಸಮೂಹವಾದ ಕಾನ್ಫಿಡೆಂಟ್‌ ಗ್ರೂಪ್‌ನ ಮುಖ್ಯಸ್ಥ ಸಿಜೆ ರಾಯ್‌ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಅವರ ಆಫೀಸಿಗೆ ಬೆಳಿಗ್ಗೆಯೇ ಐಟಿ ಅಧಿಕಾರಿಗಳು ತಪಾಸಣೆಗೆ ಹೋಗಿದ್ದಾರೆ.

ಮಾಹಿತಿಯ ಪ್ರಕಾರ, ಇಂದು ಕಾನ್ಫಿಡೆಂಟ್‌ ಗ್ರೂಪ್‌ಗೆ ಸಂಬಂಧಿಸಿದ ಕಚೇರಿಗಳ ಮೇಲೆ ಇಂದು (ಜನವರಿ 30) ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದರು. ಬಳಿಕ ಪರಿಶೀಲನೆ ನಡೆಸುತ್ತಿದ್ದರು. ಇದೇ ರೀತಿಯ ಐಟಿ ಪರಿಶೀಲನೆಗಳು ಕಳೆದ ಕೆಲವು ವರ್ಷಗಳಿಂದ ನಡೆಯುತ್ತಿದ್ದು, ಇದರ ಒತ್ತಡವು ಉದ್ಯಮಿಯ ಮೇಲೆ ಮಾನಸಿಕ ಪರಿಣಾಮ ಬೀರಿರಬಹುದೆಂದು ಎಂದು ಪ್ರಾಥಮಿಕ ಮಾಹಿತಿ ಹೇಳುತ್ತಿದೆ. ಈ ಹಿನ್ನೆಲೆಯಲ್ಲಿಯೇ ಅವರು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಸಿಜೆ ರಾಯ್ ಸಾವು, ಉದ್ಯಮ ವಲಯದಲ್ಲಿ ಭಾರೀ ಚರ್ಚೆ:

ಇಂದು ಈ ಆಘಾತಕಾರಿ ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೇಂದ್ರ ವಿಭಾಗದ ಡಿಸಿಪಿಯವರು ಅವರು ಪ್ರಕರಣದ ಕುರಿತು ಆದಾಯ ತೆರಿಗೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸಾವಿನ ನಿಖರ ಕಾರಣ ಹಾಗೂ ಹಿನ್ನೆಲೆ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದು ಸತ್ಯ ಸಂಗತಿ ಇನ್ನಷ್ಟೇ ಬೆಳಕಿಗೆ ಬರಬೇಕಿದೆ. ಈ ಘಟನೆ ನಗರದ ಉದ್ಯಮ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪೊಲೀಸ್‌ ತನಿಖೆಯ ನಂತರ ಹೆಚ್ಚಿನ ವಿವರಗಳು ಲಭ್ಯವಾಗುವ ನಿರೀಕ್ಷೆಯಿದೆ.

ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಕಾನ್ಫಿಡೆಂಟ್ ಗ್ರೂಪ್‌ನ ಚೇರ್ಮನ್ ಸಿಜೆ ರಾಯ್ ಅವರು ತಮ್ಮ ಕಚೇರಿಯಲ್ಲಿ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸಿಕ್ಕ ಪ್ರಾಥಮಿಕ ಮಾಹಿತಿ ಪ್ರಕಾರ, ಇಂದು ಬೆಳಗ್ಗೆ ಕಾನ್ಫಿಡೆಂಟ್ ಗ್ರೂಪ್‌ಗೆ ಸಂಬಂಧಿಸಿದ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದರು. ಮಧ್ಯಾಹ್ನ ವೇಳೆಗೆ ಕಚೇರಿಗೆ ಆಗಮಿಸಿದ್ದ ಸಿಜೆ ರಾಯ್ ಅವರು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಐಟಿ ಅಧಿಕಾರಿಗಳಿಂದ ವಿಚಾರಣೆಗೆ ಒಳಗಾಗಿದ್ದಾರೆ. ಕೆಲವು ದಾಖಲೆಗಳನ್ನು ಹಸ್ತಾಂತರಿಸಿದ ಅವರು ಬಳಿಕ ಇನ್ನಷ್ಟು ದಾಖಲೆ ತರಲು ಕಚೇರಿಯ ಒಳಕೋಣೆಗೆ ತೆರಳಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.

ಗುಂಡು ಹಾರಿಸಿಕೊಂಡ ಒದ್ದಾಡುತ್ತಿದ್ದ ಅವರನ್ನು ತಕ್ಷಣವೇ ಆನೇಕಲ್‌ನ ನಾರಾಯಣ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಆಸ್ಪತ್ರೆ ತಲುಪುವ ಮುನ್ನವೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಘಟನೆ ತಿಳಿದ ಕೂಡಲೇ ಅಶೋಕ್ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಂದುವರೆದ ಪರಿಶೀಲನೆ ಕಾರ್ಯ:

ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಅವರು ಪ್ರಕರಣದ ತನಿಖೆ ಶುರುಮಾಡಿದ್ದು, ಘಟನೆಗೆ ಬಳಸಿದ ಪಿಸ್ತೂಲ್ ಅನ್ನು ವಶಕ್ಕೆ ಪಡೆಯಲಾಗಿದೆ. ಕಚೇರಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಯಾವುದೇ ಡೆತ್ ನೋಟ್, ಮೊಬೈಲ್ ಸಂದೇಶಗಳು ಅಥವಾ ಇತರ ಸುಳಿವುಗಳಿಗಾಗಿ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ.

ಮೂಲತಃ ಕೇರಳದವರಾಗಿರುವ ಸಿ.ಜೆ. ರಾಯ್ ಅವರು 1997ರಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗ ಜೀವನ ಆರಂಭಿಸಿದ್ದಾರೆ. ಬಳಿಕ, ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಕಾಲಿಟ್ಟ ಅವರು, ಕಾನ್ಫಿಡೆಂಟ್ ಗ್ರೂಪ್ ಎಂಬ ಮಹಾ ಸಂಸ್ಥೆಯನ್ನು ಕಟ್ಟಿ ಬೆಳಸಿದರು. ಆರಂಭದಲ್ಲಿ ಸಣ್ಣ ಮಟ್ಟದಲ್ಲಿ ಉದ್ಯಮ ಆರಂಭಿಸಿದ ಅವರು, ಬಳಿಕ ಭಾರೀ ಪ್ರಮಾಣದಲ್ಲಿ ವ್ಯವಹಾರ ವಿಸ್ತರಿಸಿದ್ದರು. ಆ ಬಳಿಕ ಆದಾಯಕ್ಕೆ ಮೀರಿದ ಗಳಿಕೆಯ ಕಾರಣಕ್ಕೆ ಹಲವು ವರ್ಷಗಳಿಂದ ಆಗಾಗ ಐಟಿ ಇಲಾಖೆ ದಾಳಿಗೆ ಒಳಗಾಗುತ್ತಿದ್ದರು. ಇಂದು ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಶರಣಾಗಿದ್ದಾರೆ ಎಂಬ ಮಾಹಿತಿ ಬಂದಿದೆ.

*****

ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ದುಡುಕಿನಿಂದ ಆ8ಹತ್ಯೆಯ ನಿರ್ಧಾರ ತೆಗೆದುಕೊಳ್ಳುವುದರಿಂದ ಸಮಸ್ಯೆಗೆ ಯಾವುದೇ ಪರಿಹಾರ ಸಿಗಲ್ಲ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ ಸ್ವಯಂಹಾನಿ ಮಾಡಿಕೊಳ್ಳುವ ಯೋಚನೆ/ಮನೋವ್ಯಥೆ ಅನುಭವಿಸುತ್ತಿದ್ದರೆ ಅಥವಾ ಸಂಕಷ್ಟದ ಸ್ಥಿತಿಯಲ್ಲಿದ್ದರೆ, ದಯವಿಟ್ಟು ಯಾರೊಂದಿಗಾದರೂ ಮಾತನಾಡಿ, ಅದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗುವುದು. ಕರ್ನಾಟಕದಲ್ಲಿ ಸಹಾಯ ಮತ್ತು ಸಮಾಲೋಚನೆಗಾಗಿ ಕೆಳಗಿನ ಸೇವೆಗಳು ಲಭ್ಯವಿವೆ: 24×7 ಮಾನಸಿಕ ಆರೋಗ್ಯ ಸಹಾಯವಾಣಿ ಟೆಲಿ-ಮಾನಸ್ (Tele-MANAS): 14416 ಅಥವಾ 1800-89-14416 (ರಾಷ್ಟ್ರೀಯ ಟೆಲಿ-ಮಾನಸಿಕ ಆರೋಗ್ಯ ಸೇವೆ).