ಬಿಗ್ ಬಾಸ್ ಕನ್ನಡ 11 ಸೀಸನ್‌ಗೆ ರೂ. 50 ಲಕ್ಷ ಹಣ ಕೊಟ್ಟು ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡಿದ್ದರು. ಅವರ ಸಂಸ್ಥೆಯ ಮೇಲೆ ಇತ್ತೀಚೆಗೆ ಪದೇಪದೇ ಐಟಿ ದಾಳಿ ಆಗುತ್ತಿತ್ತು. ಈ ಕಾರಣಕ್ಕೆ ಉದ್ಯಮಿ ಸೆಜೆ ರಾಯ್ ಅವರು ಬೇಸರಪಟ್ಟು ತಲೆಗೆ ಗುಂಡಿಕ್ಕಿಕೊಂಡು ಸಾವಿಗೆ ಶರಣಾಗಿದ್ದಾರೆ.
ಕಾನ್ಫಿಡೆಂಟ್ ಗ್ರೂಫ್ ಸಂಸ್ಥೆಯ ಚೇರ್ಮನ್ ಸಿಜೆ ರಾಯ್ (CJ Roy) ಅವರು ಆತ್ಮ*ಹತ್ಯೆ ಮಾಡಿಕೊಂಡಿರುವ ಸುದ್ದಿ ಇಡೀ ಕರ್ನಾಟಕವನ್ನು ಬೆಚ್ಚಿ ಬೀಳಿಸಿದೆ. ಅವರು ಸಾಕಷ್ಟು ದೊಡ್ಡ ಉದ್ಯಮಿಯಾಗಿದ್ದರು. ಜೊತೆಗೆ, ಕನ್ನಡ ಬಿಗ್ ಬಾಸ್ ಶೋಗೆ ರೂ. 50 ಲಕ್ಷ ಕೊಟ್ಟು ಆಗ ಸಖತ್ ಸುದ್ದಿಯಾಗಿದ್ದರು. ಅವರು ಕಾನ್ಫಿಡೆಂಟ್ ಗ್ರೂಫ್ ಸಂಸ್ಥೆಯನ್ನು ಮುನ್ನಡೆಸುವ ಜೊತೆಗೆ ಬಹಳಷ್ಟು ಸಾಮಾಜಿಕ ಕೆಲಸ ಹಾಗೂ ಸಿನಿಮಾ-ಮನರಂಜನಾ ಕ್ಷೇತ್ರಕ್ಕೆ ಕೊಡುಗೆ ಕೂಡ ನೀಡಿದ್ದಾರೆ.
ಕಳೆದ ಸೀಸನ್ ಅಂದರೆ, ಬಿಗ್ ಬಾಸ್ ಕನ್ನಡ 11ಗೆ ರೂ. 50 ಲಕ್ಷ ಹಣ ಕೊಟ್ಟು ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡಿದ್ದರು. ಅವರ ಸಂಸ್ಥೆಯ ಮೇಲೆ ಇತ್ತೀಚೆಗೆ ಪದೇಪದೇ ಐಟಿ ದಾಳಿ ಆಗುತ್ತಿತ್ತು. ಅದಕ್ಕೂ ಮೊದಲು ಕೂಡ ಸ್ಟಾರ್ ಸುವರ್ಣದ ರಿಯಾಲಿಟಿ ಶೋಗೆ ಕೂಡ ಉದ್ಯಮಿ ಸಿಜೆ ಜಾರ್ಜ್ ಅವರು ಹಣ ನೀಡಿದ್ದರು, ಸ್ಪಾನ್ಸರ್ ಆಗಿದ್ದರು. ಈ ಕಾರಣಕ್ಕೆ ಉದ್ಯಮಿ ಸೆಜೆ ರಾಯ್ ಅವರು ಬೇಸರಪಟ್ಟು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತಲೆಗೆ ಗುಂಡಿಕ್ಕಿಕೊಂಡು ಅವರ ಆನೇಪಾಳ್ಯದ ಮನೆಯಲ್ಲಿ ಸಾವಿಗೆ ಶರಣಾಗಿದ್ದಾರೆ.
ಆದಾಯಕ್ಕೂ ಮೀರಿದ ಗಳಿಕೆ ಕಾರಣಕ್ಕೆ ಸಿಜೆ ರಾಯ್ ಅವರ ಮೇಲೆ ಇತ್ತೀಚೆಗೆ ಬಹಳಷ್ಟು ಬಾರಿ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿತ್ತು. ಇಂದು ಕೂಡ ಅವರ ಆದಾಯದ ಲೆಕ್ಕಾಚಾರದಲ್ಲಿ ಐಟಿ ಇಲಾಖೆ ತಪಾಸಣೆ ನಡೆಸುತ್ತಿದ್ದಾಗ ಅವರು ಐಟಿ ದಾಳಿಗೆ ಬೇಸರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ಮುಂದಿನ ತನಿಖೆ ಪ್ರಗತಿಯಲ್ಲಿದೆ.
******
ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ದುಡುಕಿನಿಂದ ಆ8ಹತ್ಯೆಯ ನಿರ್ಧಾರ ತೆಗೆದುಕೊಳ್ಳುವುದರಿಂದ ಸಮಸ್ಯೆಗೆ ಯಾವುದೇ ಪರಿಹಾರ ಸಿಗಲ್ಲ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ ಸ್ವಯಂಹಾನಿ ಮಾಡಿಕೊಳ್ಳುವ ಯೋಚನೆ/ಮನೋವ್ಯಥೆ ಅನುಭವಿಸುತ್ತಿದ್ದರೆ ಅಥವಾ ಸಂಕಷ್ಟದ ಸ್ಥಿತಿಯಲ್ಲಿದ್ದರೆ, ದಯವಿಟ್ಟು ಯಾರೊಂದಿಗಾದರೂ ಮಾತನಾಡಿ, ಅದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗುವುದು. ಕರ್ನಾಟಕದಲ್ಲಿ ಸಹಾಯ ಮತ್ತು ಸಮಾಲೋಚನೆಗಾಗಿ ಕೆಳಗಿನ ಸೇವೆಗಳು ಲಭ್ಯವಿವೆ: 24×7 ಮಾನಸಿಕ ಆರೋಗ್ಯ ಸಹಾಯವಾಣಿ ಟೆಲಿ-ಮಾನಸ್ (Tele-MANAS): 14416 ಅಥವಾ 1800-89-14416 (ರಾಷ್ಟ್ರೀಯ ಟೆಲಿ-ಮಾನಸಿಕ ಆರೋಗ್ಯ ಸೇವೆ).


