ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಕುಟುಂಬದಲ್ಲಿ ಎಷ್ಟುಮಂದಿ ಸ್ಪರ್ಧಿಸಬೇಕು ಎಂಬ ಗೊಂದಲ ಇನ್ನೂ ಮುಂದುವರಿದಿದೆ. ಅನಿತಾ ಕುಮಾರಸ್ವಾಮಿ ಮತ್ತು ಪ್ರಜ್ವಲ್‌ ರೇವಣ್ಣ ಅವರೂ ಸ್ಪರ್ಧಿಸಲು ಗೌಡರು ಹಸಿರು ನಿಶಾನೆ ತೋರಿದ್ದಾರೆ ಎಂಬ ವದಂತಿಗಳ ನಡುವೆಯೇ ಪಕ್ಷದ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರು ಭಿನ್ನ ಹೇಳಿಕೆ ನೀಡಿದ್ದಾರೆ.

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಕುಟುಂಬದಲ್ಲಿ ಎಷ್ಟುಮಂದಿ ಸ್ಪರ್ಧಿಸಬೇಕು ಎಂಬ ಗೊಂದಲ ಇನ್ನೂ ಮುಂದುವರಿದಿದೆ.

ಅನಿತಾ ಕುಮಾರಸ್ವಾಮಿ ಮತ್ತು ಪ್ರಜ್ವಲ್‌ ರೇವಣ್ಣ ಅವರೂ ಸ್ಪರ್ಧಿಸಲು ಗೌಡರು ಹಸಿರು ನಿಶಾನೆ ತೋರಿದ್ದಾರೆ ಎಂಬ ವದಂತಿಗಳ ನಡುವೆಯೇ ಪಕ್ಷದ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರು ಭಿನ್ನ ಹೇಳಿಕೆ ನೀಡಿದ್ದಾರೆ.

‘ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಇಬ್ಬರು (ತಾವು ಮತ್ತು ಎಚ್‌.ಡಿ.ರೇವಣ್ಣ) ಮಾತ್ರ ಸ್ಪರ್ಧೆ ಮಾಡಬೇಕೆ ನ್ನುವುದು ನನ್ನ ನಿಲುವು. ಇದನ್ನು ಹಿಂದೆಯೇ ಹೇಳಿದ್ದೆ. ಈಗಲೂ ಹೇಳುತ್ತಿದ್ದೇನೆ' ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ಪ್ರಜ್ವಲ್‌ ರೇವಣ್ಣ ಸ್ಪರ್ಧೆ ಮಾಡುವ ವಿಚಾರ ಇನ್ನೂ ತೀರ್ಮಾನವಾಗಿಲ್ಲ. ಅದೇ ರೀತಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಮಾಡುವುದೂ ಕೂಡ ನಿರ್ಧಾರವಾಗಿಲ್ಲ. ಕುಟುಂಬದಿಂದ ಇಬ್ಬರು ಮಾತ್ರ ಸ್ಪರ್ಧಿಸಿದರೆ ಅದೇ ಸೂಕ್ತ ಎಂಬುದನ್ನು ಹಿಂದೆಯೇ ಹೇಳಿದ್ದೆ. ಈಗಲೂ ನನ್ನದು ಅದೇ ನಿಲುವು ಎಂದರು.

ತಮ್ಮ ಕುಟುಂಬದಿಂದ ಕುಮಾರಸ್ವಾಮಿ ಮತ್ತು ರೇವಣ್ಣ ಮಾತ್ರ ಸ್ಪರ್ಧಿಸಲಿದ್ದಾರೆ ಎಂದು ಈ ಹಿಂದೆಯೇ ದೇವೇಗೌಡರು ಹಲವು ಬಾರಿ ಹೇಳಿಕೆ ನೀಡಿದ್ದರು. ಈಗಲೂ ಇಬ್ಬರ ಬದಲು ನಾಲ್ವರು ಸ್ಪರ್ಧಿಸುತ್ತಾರೆ ಎಂಬುದರ ಬಗ್ಗೆ ಗೌಡರು ಏನನ್ನೂ ಹೇಳಿಲ್ಲ. ಆದರೆ, ಕುಮಾರಸ್ವಾಮಿ ಮಾತ್ರ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.