ಬೆಂಗಳೂರು (ಸೆ.22): ಕಾವೇರಿ ವಿಚಾರವಾಗಿ ನಾಳೆ ಒಂದು ದಿನ ವಿಶೇಷ ಅಧಿವೇಶನವನ್ನು ಸ್ಪೀಕರ್​ ಕೋಳಿವಾಡ ಕರೆದಿದ್ದಾರೆ.

ಈ ಹಿನ್ನೆಲೆಯಲ್ಲಿ ಕಡ್ಡಾಯ ಹಾಜರಿರುವಂತೆ ಕಾಂಗ್ರೆಸ್ ಶಾಸಕರಿಗೆ ಮುಖ್ಯ ಸಚೇತಕ ಅಶೋಕ್ ಪಟ್ಟಣ್​ರಿಂದ ವಿಪ್ ಜಾರಿಗೊಳಿಸಲಾಗಿದೆ.

ನಾಳೆ ಬೆಳಗ್ಗೆ 10 ಗಂಟೆಗೆ ಸದನ ಸಲಹಾ ಸಮಿತಿ ಸಭೆ ನಡೆಯಲಿದೆ. ಕಾವೇರಿ ವಿಷಯದ ಮೇಲಿನ ಚರ್ಚೆಗೆ ಸರ್ವಪಕ್ಷಗಳು ಸಹಕಾರ ನೀಡಿವೆ. ಸದನ ನಾಯಕರ ಅಭಿಪ್ರಾಯ ಪಡೆದು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು.

ವಿಧಾನಮಂಡಲ ವಿಶೇಷ ಅಧಿವೇಶನ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ ೧೦ ಗಂಟೆಗೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯಲಿದೆ.