ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರು ಬಳಿ ಈ ಘಟನೆ ನಡೆದಿದ್ದು  ಇಂದು ಶಿಂಗಟಾಲೂರ ಏತನೀರಾವರಿ ಕಾಲುವೆ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಅವರ ಸ್ವಾಗತಕ್ಕಾಗಿ ಗದಗ ಗ್ರಾಮೀಣ ಸಿಪಿಐ ಸೋಮಶೇಖರ ಜುಟ್ಟಲ್ ಹಾಗೂ ಶಿರಹಟ್ಟಿ ಕ್ಷೇತ್ರದ ಶಾಸಕ ರಾಮಕೃಷ್ಣ ದೊಡ್ಡಮನಿ ಅಳಿಯಾ, ಕಾಂಗ್ರೆಸ್​ ಕಾರ್ಯಕರ್ತರು ಹಾಗೂ ಭದ್ರತೆಗಾಗಿ ಪೊಲೀಸ್ ಅಧಿಕಾರಿಗಳು ಸೇರಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ  ಇವರ ನಡುವೆ ಮಾತಿನ ಚಕಮಕಿ ನಡೆದು ಒಬ್ಬರನ್ನೊಬ್ಬರು ತಳ್ಳಾಡಿಕೊಂಡಿದ್ದಾರೆ.

ಗದಗ(ನ.11): ಎಸ್.ಪಿ ಸಂತೋಷಬಾಬು ಸಮ್ಮುಖದಲ್ಲೇ ಕಾಂಗ್ರೆಸ್​ ಕಾರ್ಯಕರ್ತರು ಹಾಗೂ ಪೊಲೀಸ್​ ಅಧಿಕಾರಿಗಳ ನಡುವೆ ಜಟಾಪಟಿ ನಡೆದಿದೆ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರು ಬಳಿ ಈ ಘಟನೆ ನಡೆದಿದ್ದು ಇಂದು ಶಿಂಗಟಾಲೂರ ಏತನೀರಾವರಿ ಕಾಲುವೆ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಅವರ ಸ್ವಾಗತಕ್ಕಾಗಿ ಗದಗ ಗ್ರಾಮೀಣ ಸಿಪಿಐ ಸೋಮಶೇಖರ ಜುಟ್ಟಲ್ ಹಾಗೂ ಶಿರಹಟ್ಟಿ ಕ್ಷೇತ್ರದ ಶಾಸಕ ರಾಮಕೃಷ್ಣ ದೊಡ್ಡಮನಿ ಅಳಿಯಾ, ಕಾಂಗ್ರೆಸ್​ ಕಾರ್ಯಕರ್ತರು ಹಾಗೂ ಭದ್ರತೆಗಾಗಿ ಪೊಲೀಸ್ ಅಧಿಕಾರಿಗಳು ಸೇರಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಇವರ ನಡುವೆ ಮಾತಿನ ಚಕಮಕಿ ನಡೆದು ಒಬ್ಬರನ್ನೊಬ್ಬರು ತಳ್ಳಾಡಿಕೊಂಡಿದ್ದಾರೆ.

ಆದರೂ ಎಸ್​ಪಿ ಸಂತೋಷ್ ಬಾಬು ತಮ್ಮ ಸಿಬ್ಬಂದಿಗೆ ತಿಳಿಹೇಳುವುದನ್ನು ಬಿಟ್ಟು ಶಾಸಕ ರಾಮಕೃಷ್ಣ ದೊಡ್ಡಮನಿ ಅವರ ಅಳಿಯನ ಮನವೊಲಿಸುವಲ್ಲಿ ಮುಂದಾದ ದೃಶ್ಯ ಕಂಡು ಬಂತು.