ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಒಂದಾಗಿ ಲೋಕಸಭಾ ಚುನಾವಣೆ ಎದುರಿಸಲು ಸಜ್ಜಾಗಿದ್ದು ಇದರ ಹಿಂದೆ ಮಾಸ್ಟರ್ ಪ್ಲಾನ್ ತಯಾರಾಗಿದೆ. ಮೈತ್ರಿ ಮಾಡಿಕೊಂಡ ಪ್ರಮುಖ ಉದ್ದೇಶವೆಂದರೆ ಮೋದಿಯನ್ನು ಸೋಲಿಸುವುದೇ ಆಗಿದೆ. 

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಈಗಾಗಲೇ ಹೈಕಮಾಂಡ್ ನಾಯಕರು ತೀರ್ಮಾನಿಸಿದ್ದಾರೆ. ಹಾಗಾಗಿ ಈ ಮೈತ್ರಿಗೆ ಎರಡೂ ಪಕ್ಷದವರೂ ಬದ್ಧವಾಗಿರಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ. 

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಜೊತೆಗಿನ ಮೈತ್ರಿ ಸಂಬಂಧ ಈಗಾಗಲೇ ಕಾಂಗ್ರೆಸ್ ವರಿಷ್ಠರು ತೀರ್ಮಾನಿಸಿದ್ದಾರೆ. 

ಹಾಗಾಗಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮೈತ್ರಿಯಾದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಜೆಡಿಎಸ್‌ನವರು, ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಕಾಂಗ್ರೆಸ್‌ನವರು ಸಹಕಾರ ನೀಡಬೇಕು. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅನಿವಾರ್ಯ. ಇದಕ್ಕೆ ಎರಡೂ ಪಕ್ಷಗಳೂ ಬದ್ಧವಾಗಿ ನಡೆದುಕೊಳ್ಳಬೇಕು ಎಂದರು.