ಬೆಂಗಳೂರು [ಜು.08] : ರಾಜ್ಯ ರಾಜಕೀಯದಲ್ಲಿ ಸುನಾಮಿಯಂತೆ ರಾಜೀನಾಮೆ ಪರ್ವ ಎದ್ದಿದೆ. 13 ಶಾಸಕರು ರಾಜೀನಾಮೆ ನೀಡಿದ ಬೆನ್ನಲ್ಲೇ ಎಲ್ಲಾ ಸಚಿವರು ಕೂಡ ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಈ ರಾಜಕೀಯ ಪ್ರಹಸನಕ್ಕೆ ರಾಜ್ಯದ ಜನತೆಯಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ರಾಜೀನಾಮೆ ನೀಡಿದ ಶಾಸಕರ ವಿರುದ್ಧ ಇದೀಗ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಅಸಮಾಧಾನ ಹೊರಹಾಕುತ್ತಿದ್ದಾರೆ.

 ಮತ ನೀಡಿದ ಮತದಾರರಿಗೆ ಬೆಲೆ ನೀಡದವರು ಎಂದು ರಾಜೀನಾಮೆ ನೀಡದ ಶಾಸಕರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಶ್ರದ್ಧಾಂಜಲಿ ಪೋಸ್ಟ್ ಗಳನ್ನು ಹಾಕಲಾಗುತ್ತಿದೆ. ಈ ಮೂಲಕ ಶಾಸಕರ ನಡೆ ವಿರುದ್ಧ ಜನತೆ ಆಕ್ರೋಶ ಹೊರಹಾಕುತ್ತಿದ್ದಾರೆ. 

ರಾಜೀನಾಮೆ ನೀಡಿದ ರಮೇಶ್ ಜಾರಕಿಹೊಳಿ, ಬಿ.ಸಿ ಪಾಟೀಲ್, ಮಹೇಶ್ ಕುಮಟಳ್ಳಿ, ಎಚ್. ವಿಶ್ವನಾಥ್, ಪ್ರತಾಪ್ ಗೌಡ ಪಾಟೀಲ್ ಸೇರಿದಂತೆ ಹಲವರ ಶ್ರದ್ಧಾಂಜಲಿ ಪೋಸ್ಟ್ ಗಳನ್ನು ಫೇಸ್ ಬುಕ್ ಗಳಲ್ಲಿ ಹಾಕಲಾಗಿದೆ.