ಮಧ್ಯ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿ ಕಮಲನಾಥ್‌ ನೇಮಕ

First Published 27, Apr 2018, 9:50 AM IST
Congress appoints Kamal Nath as Madhya Pradesh state chief
Highlights

ಈ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ಮಧ್ಯಪ್ರದೇಶದ ಕಾಂಗ್ರೆಸ್‌ ಘಟಕಕ್ಕೆ ಪಕ್ಷದ ಹಿರಿಯ ನಾಯಕ ಕಮಲನಾಥ್‌ ಅವರನ್ನು ಅಧ್ಯಕ್ಷರನ್ನಾಗಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ನೇಮಕ ಮಾಡಿದ್ದಾರೆ.

ನವದೆಹಲಿ : ಈ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ಮಧ್ಯಪ್ರದೇಶದ ಕಾಂಗ್ರೆಸ್‌ ಘಟಕಕ್ಕೆ ಪಕ್ಷದ ಹಿರಿಯ ನಾಯಕ ಕಮಲನಾಥ್‌ ಅವರನ್ನು ಅಧ್ಯಕ್ಷರನ್ನಾಗಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ನೇಮಕ ಮಾಡಿದ್ದಾರೆ. ರಾಜ್ಯದ ಮತ್ತೊಬ್ಬ ಪ್ರಭಾವಿ ನಾಯಕ ಜ್ಯೋತಿರಾದಿತ್ಯ ಸಿಂಧ್ಯಾ ಅವರನ್ನು ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ. 

ಅದರೊಂದಿಗೆ, ಚುನಾವಣೆಯಲ್ಲಿ ಪಕ್ಷ ಗೆದ್ದರೆ ಮುಖ್ಯಮಂತ್ರಿ ಹುದ್ದೆಗೆ ಪ್ರತಿಸ್ಪರ್ಧಿಗಳಾಗಿರುವ ಇಬ್ಬರು ಪ್ರಮುಖ ವ್ಯಕ್ತಿಗಳಿಗೆ ಒಂದೊಂದು ಪ್ರಮುಖ ಹೊಣೆಗಾರಿಕೆ ವಹಿಸಿ ಸಮತೋಲನ ಕಾಪಾಡುವ ಪ್ರಯತ್ನ ಮಾಡಿದ್ದಾರೆ.

ಇದೇ ವೇಳೆ, ಗೋವಾ ಕಾಂಗ್ರೆಸ್‌ ಘಟಕದ ಅಧ್ಯಕ್ಷರನ್ನಾಗಿ ಗಿರೀಶ್‌ ಛೋಡಣಕರ್‌ ಅವರನ್ನು ನೇಮಕ ಮಾಡಿದ್ದಾರೆ. ಇತ್ತೀಚೆಗಷ್ಟೇ ಗೋವಾ ಕಾಂಗ್ರೆಸ್‌ ಅಧ್ಯಕ್ಷ ಶಾಂತಾರಾಮ್‌ ನಾಯಕ್‌ ರಾಜೀನಾಮೆ ನೀಡಿದ್ದರು.

loader