Asianet Suvarna News Asianet Suvarna News

ಅಭ್ಯರ್ಥಿ ಪಟ್ಟಿಪ್ರಕಟಿಸಿ, ರಣತಂತ್ರ ಹೆಣೆಯಲು ಸಿದ್ಧತೆ

ಕೇಂದ್ರ ಚುನಾವಣಾ ಆಯೋಗವು ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ ಚುನಾವಣೆ ಸಿದ್ಧತೆಗೆ ಅಣಿಯಾಗಿದ್ದು, ಚುನಾವಣಾ ಪ್ರಣಾಳಿಕೆ ಸಿದ್ಧತೆ, ಅಭ್ಯರ್ಥಿಗಳ ಆಯ್ಕೆ, ಪ್ರಚಾರ ರಣತಂತ್ರದ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾಗಿದೆ.

Congress Candidate List Released Soon

ಬೆಂಗಳೂರು : ಕೇಂದ್ರ ಚುನಾವಣಾ ಆಯೋಗವು ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ ಚುನಾವಣೆ ಸಿದ್ಧತೆಗೆ ಅಣಿಯಾಗಿದ್ದು, ಚುನಾವಣಾ ಪ್ರಣಾಳಿಕೆ ಸಿದ್ಧತೆ, ಅಭ್ಯರ್ಥಿಗಳ ಆಯ್ಕೆ, ಪ್ರಚಾರ ರಣತಂತ್ರದ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾಗಿದೆ.

ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಶೀಘ್ರವಾಗಿ ಅಭ್ಯರ್ಥಿಗಳ ಘೋಷಣೆಗೆ ಮುಂದಾಗಿರುವ ರಾಜ್ಯ ಕಾಂಗ್ರೆಸ್‌ ಸೋಮವಾರ ಚುನಾವಣಾ ಸಮಿತಿ ಸಭೆಯಲ್ಲಿ ತೆಗೆದುಕೊಂಡಿರುವ ತೀರ್ಮಾನದಂತೆ ಆಕಾಂಕ್ಷಿಗಳ ಪಟ್ಟಿಯನ್ನು ಹೈಕಮಾಂಡ್‌ಗೆ ರವಾನೆ ಮಾಡಿದೆ.

ಅಲ್ಲದೆ, ಮಾ.28ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಅವರು ಕೆಪಿಸಿಸಿ ಕಚೇರಿಯಲ್ಲಿ ಚುನಾವಣಾ ಸಿದ್ಧತೆ ಹಾಗೂ ರಣತಂತ್ರ ರೂಪಿಸುವ ಬಗ್ಗೆ ಸಭೆ ನಡೆಸಲಿದ್ದಾರೆ. ವಿಭಾಗವಾರು ಸಭೆ ನಡೆಸಿ ಜಿಲ್ಲಾ ಉಸ್ತುವಾರಿ ಸಚಿವರಿಂದ ವರದಿ ಪಡೆಯಲಿದ್ದಾರೆ. ಏ.2ರಂದು ಹೈಕಮಾಂಡ್‌ ಮಟ್ಟದಲ್ಲಿ ಮತ್ತೊಂದು ಸಭೆ ನಡೆಯಲಿದ್ದು, ಏ.9 ಹಾಗೂ 10ರಂದು ಸ್ಕ್ರೀನಿಂಗ್‌ ಸಮಿತಿ ಸಭೆ ನಡೆಯಲಿದೆ. ಈ ಮೂಲಕ ಏ.10ರೊಳಗಾಗಿ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಸಿದ್ಧಪಡಿಸಲು ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ಸದ್ಯದಲ್ಲೇ ರಾಜ್ಯ ಕಾಂಗ್ರೆಸ್‌ ಸ್ಕ್ರೀನಿಂಗ್‌ ಸಮಿತಿ ಅಧ್ಯಕ್ಷ ಮಧುಸೂದನ್‌ ಮಿಸ್ತ್ರಿ ಅವರ ತಂಡವು ಚುನಾವಣಾ ಸಮಿತಿ ಸಭೆ ನಡೆಸಲಿದೆ. ಇದೆಲ್ಲದರ ನಡುವೆ ವೀರಪ್ಪ ಮೊಯ್ಲಿ ನೇತೃತ್ವದಲ್ಲಿ ರಚಿಸಿರುವ ಚುನಾವಣಾ ಪ್ರಣಾಳಿಕೆ ಸಮಿತಿಯು ಮಾಚ್‌ರ್‍ ಒಳಗಾಗಿ ಪ್ರಣಾಳಿಕೆ ರಚಿಸುವ ಕಾರ್ಯ ಸಿದ್ಧಪಡಿಸಲು ಸೂಚನೆ ನೀಡಲಾಗಿದೆ. ನಾಲ್ಕೂ ವಿಭಾಗಕ್ಕೂ ಪ್ರತ್ಯೇಕ ಪ್ರಣಾಳಿಕೆ ರಚಿಸಿದ್ದು ಹೈಕಮಾಂಡ್‌ ಒಪ್ಪಿಗೆ ದೊರೆತ ಬಳಿಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ.

ಮತ್ತೆ ರಾಹುಲ್‌ ಅಬ್ಬರಕ್ಕೆ ಸಿದ್ಧತೆ:

ಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲೇ ರಾಹುಲ್‌ಗಾಂಧಿ ಅವರಿಂದ ಮತ್ತೆ ಎರಡು ಸುತ್ತಿನ ಜನಾಶೀರ್ವಾದ ಯಾತ್ರೆ ನಡೆಸುವ ಮೂಲಕ ಕಾಂಗ್ರೆಸ್‌ ಪರ ಅಲೆ ಸೃಷ್ಟಿಸಲು ಪಕ್ಷ ಸಿದ್ಧತೆ ನಡೆಸಿದೆ.

ಮೈಸೂರು ಭಾಗದಲ್ಲಿ ಯಶಸ್ವಿ ಜನಾಶೀರ್ವಾದ ಯಾತ್ರೆ ಪೂರ್ಣಗೊಳಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಅವರು ಏಪ್ರಿಲ್‌ 3, 4 ಹಾಗೂ ಏಪ್ರಿಲ್‌ 7, 8ರಂದು ಮತ್ತೊಂದು ಸುತ್ತಿನ ಜನಾಶೀರ್ವಾದ ಯಾತ್ರೆಗಾಗಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

ಏಪ್ರಿಲ್‌ 3 ಹಾಗೂ 4 ರಂದು ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಹಾಗೂ ತುಮಕೂರು ವ್ಯಾಪ್ತಿಯಲ್ಲಿ ನಡೆಯಲಿರುವ ಜನಾಶೀರ್ವಾದ ಯಾತ್ರೆಯಲ್ಲಿ ರಾಹುಲ್‌ಗಾಂಧಿ ಭಾಗವಹಿಸಲಿದ್ದಾರೆ. ಏ.7 ರಂದು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ರಾರ‍ಯಲಿ ನಡೆಸಲಿದ್ದು, ಏ. 8 ರಂದು ಬೆಂಗಳೂರಿನಲ್ಲಿ ಬೃಹತ್‌ ಸಮಾವೇಶ ಮಾಡುವ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

Follow Us:
Download App:
  • android
  • ios