ಲೋಕಸಭಾ ಚುನಾವಣೆಯ ಜೊತೆಯಲ್ಲೇ ರಾಜ್ಯದಲ್ಲೂ ಚುನಾವಣೆ ನಡೆಸುವ ಬಗ್ಗೆ ವ್ಯಾಪಕ ಚರ್ಚೆಗಳಾಗುತ್ತಿರುವ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿಗೆ ಸವಾಲನ್ನು ಹಾಕಿದೆ. 

ನವದೆಹಲಿ: ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಪ್ರಸ್ತಾಪ ಕುರಿತಂತೆ ವ್ಯಾಪಕ ಚರ್ಚೆಗಳು ನಡೆಯುತ್ತಿರುವ ನಡುವೆ, ಲೋಕಸಭೆಯನ್ನು ವಿಸರ್ಜಿಸಿ ವರ್ಷಾಂತ್ಯದಲ್ಲಿ ನಡೆಯುವ ನಾಲ್ಕು ರಾಜ್ಯಗಳ ಚುನಾವಣೆಯೊಂದಿಗೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿಗೆ, ಕಾಂಗ್ರೆಸ್‌ ಸವಾಲೊಡ್ಡಿದೆ.

Add Asianetnews Kannada as a Preferred SourcegooglePreferred

ಇದೇ ವೇಳೆ ವಿಧಾನಸಭಾ ಚುನಾವಣೆಗಳನ್ನು ಮುಂದೂಡಿ ಅಥವಾ ಹಿಂದೂಡಿ ಅವುಗಳನ್ನು 2019ರ ಲೋಕಸಭಾ ಚುನಾವಣೆಯೊಂದಿಗೆ ನಡೆಸುವುದು ಸಂವಿಧಾನ ಅಥವಾ ಕಾನೂನಿನಡಿ ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಅಶೋಕ್‌ ಗೆಹ್ಲೊಟ್‌ ಹೇಳಿದ್ದಾರೆ.

‘ಏಕಕಾಲದ ಚುನಾವಣೆ ನಡೆಸುವುದಕ್ಕೆ ಒಂದೇ ಒಂದು ಮಾರ್ಗವಿದೆ. ಪ್ರಧಾನಿಯವರು ಲೋಕಸಭೆಯನ್ನು ವಿಸರ್ಜಿಸಬೇಕು ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳ ಜೊತೆ ಲೋಕಸಭಾ ಚುನಾವಣೆಯನ್ನೂ ನಡೆಸಬಹುದು’ ಎಂದು ಅವರು ಹೇಳಿದ್ದಾರೆ. ಈ ನಾಲ್ಕು ರಾಜ್ಯಗಳು ಸೇರಿದಂತೆ 11 ವಿಧಾನಸಭೆಗಳು ಮತ್ತು ಲೋಕಸಭಾ ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವಂತೆ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಪ್ರತಿಪಾದಿಸಿದ ಬೆನ್ನಲ್ಲೇ ಗೆಹ್ಲೋಟ್‌ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.