ನವದೆಹಲಿ(ನ.05): ಪ್ರಾದೇಶಿಕ ಸಂಗ್ರಹ ಆರ್ಥಿಕ ಪಾಲುದಾರಿಕೆ(ಆರ್‌ಸಿಇಪಿ) ವ್ಯಾಪಾರದ ಒಪ್ಪಂದಕ್ಕೆ ಪ್ರಧಾನಿ ಮೋದಿ ಸಹಿ ಹಾಕದಿರಲು ನಮ್ಮ ಒತ್ತಡವೇ ಕಾರಣ ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ.

ಮೋದಿ ಒಪ್ಪಂದದಿಂದ ಹಿಂದೆ ಸರಿಯಲು ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ಹಾಕಿದ ಒತ್ತಡವೇ ಕಾರಣ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಅವರ  ತೀವ್ರ ಒತ್ತಡದಿಂದ ಬಿಜೆಪಿ ಸರ್ಕಾರ ರೈತರು, ಹಾಲು ಉತ್ಪಾದಕರು, ಮೀನುಗಾರರು, ಸಣ್ಣ ಮತ್ತು ಮಧ್ಯಮ ವ್ಯವಹಾರಸ್ತರಿಗೆ ಮಾರಕವಾಗಲಿದ್ದ ಒಪ್ಪಂದದಿಂದ ಹಿಂದೆ ಸರಿದಿದೆ ಎಂದು ಸುರ್ಜೆವಾಲಾ ಟ್ವೀಟ್ ಮಾಡಿದ್ದಾರೆ.

ಭಾರತ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ(RCEP) ಭಾಗವಾಗುವುದಿಲ್ಲ ಎಂದು ಪ್ರಧಾನಿ ಮೋದಿ ಘೋಷಿಸಿದ್ದರು. 

ನಿರಾಳ ತಂದ ಮೋದಿ ಘೋಷಣೆ: ಸಾಗರಾದಚೆಯಿಂದ ಸಿಹಿ ಸುದ್ದಿ ಕೊಟ್ಟ ಪ್ರಧಾನಿ!

ಆರ್‌ಸಿಇಪಿ ಒಪ್ಪಂದದ ಪ್ರಸ್ತುತ ರೂಪ ಮೂಲ ಮನೋಭಾವ ಮತ್ತು ಈ ಹಿಂದೆ ಒಪ್ಪಿದ ಮಾರ್ಗದರ್ಶಿ ಸೂತ್ರಗಳನ್ನು ಸಂಪೂರ್ಣವಾಗಿ ಪ್ರತಿಬಿಂಬಿಸುವುದಿಲ್ಲ ಎಂದು ಪ್ರಧಾನಿ ಅಸಮಾಧಾನ ವ್ಯಕ್ತಪಡಿಸಿದ್ದರು.