ಅನಂತ್‌ಗೆ 2 ಕೋಟಿ ಕಿಕ್‌ಬ್ಯಾಕ್‌: ಆಯೋಗಕ್ಕೆ ಕಾಂಗ್ರೆಸ್‌ ದೂರು

Congress Complaint Against Ananth Kumar
Highlights

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಲು ಕೇಂದ್ರ ಸಚಿವ ಅನಂತಕುಮಾರ್‌ಗೆ ಉದಯ ಗರುಡಾಚಾರ್‌ .2 ಕೋಟಿ ಕಿಕ್‌ಬ್ಯಾಕ್‌ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಸಮಿತಿಯ ಐಟಿ ಸೆಲ್‌ ಮುಖ್ಯಚುನಾವಣಾಧಿಕಾರಿಗೆ ದೂರು ನೀಡಿದೆ.

ಬೆಂಗಳೂರು : ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಲು ಕೇಂದ್ರ ಸಚಿವ ಅನಂತಕುಮಾರ್‌ಗೆ ಉದಯ ಗರುಡಾಚಾರ್‌ .2 ಕೋಟಿ ಕಿಕ್‌ಬ್ಯಾಕ್‌ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಸಮಿತಿಯ ಐಟಿ ಸೆಲ್‌ ಮುಖ್ಯಚುನಾವಣಾಧಿಕಾರಿಗೆ ದೂರು ನೀಡಿದೆ.

ಬಿಜೆಪಿ ಮುಖಂಡ, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಎನ್‌.ಆರ್‌.ರಮೇಶ್‌, . 2 ಕೋಟಿ ಕಿಕ್‌ಬ್ಯಾಕ್‌ ಕುರಿತು ಪತ್ರಿಕಾಗೋಷ್ಠಿಯಲ್ಲಿ ಬಹಿರಂಗವಾಗಿಯೇ ಆರೋಪಿಸಿದ್ದರು. ಬಿಜೆಪಿ ಪಕ್ಷದವರೇ ಇಂತಹ ಗಂಭೀರ ಆರೋಪವನ್ನು ಕೇಂದ್ರ ಸಚಿವ ಅನಂತಕುಮಾರ್‌ ವಿರುದ್ಧ ಮಾಡಿದ್ದಾರೆ. ಚುನಾವಣೆಯಲ್ಲಿ ಪ್ರತಿ ಅಭ್ಯರ್ಥಿ ವೆಚ್ಚವನ್ನು . 28 ಲಕ್ಷಕ್ಕೆ ಮಿತಿಗೊಳಿಸಲಾಗಿದೆ. ಈಗಾಗಲೇ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಎನ್‌.ಆರ್‌.ರಮೇಶ್‌ ಅವರ ಆರೋಪವನ್ನು ಗಂಭೀರವಾಗಿ ಪರಿಗಣಿಸುವಂತೆ ದೂರಿನಲ್ಲಿ ಕಾಂಗ್ರೆಸ್‌ ಒತ್ತಾಯಿಸಿದೆ.

ಕೇಂದ್ರ ಸಚಿವ ಅನಂತಕುಮಾರ್‌ ಹಾಗೂ ಉದಯ್‌ ಗರುಡಾಚಾರ್‌ ವಿರುದ್ಧ ಪ್ರಕರಣ ದಾಖಲು ಮಾಡಬೇಕು. ಹಾಗೆಯೇ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮೂರು ಬಾರಿ ಸುಳ್ಳು ಆರೋಪ ಪಟ್ಟಿಬಿಡಗಡೆ ಮಾಡಿರುವ ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌, ಸಂಸದೆ ಶೋಭಾ ಕರಂದ್ಲಾಜೆ ಅವರಿಂದ ದಾಖಲೆ ವಶಪಡಿಸಿಕೊಂಡು ಕ್ರಮಕೈಗೊಳ್ಳಬೇಕು. ಆಧಾರ ರಹಿತ ಆರೋಪ ಮಾಡಿರುವ ಈ ಇಬ್ಬರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಐಟಿ ಸೆಲ್‌ ಆಗ್ರಹಿಸಿದೆ.

loader