ಬಿ.ಎಸ್ ಯಡಿಯೂರಪ್ಪ ವಿರುದ್ಧ ದೂರು ದಾಖಲು

Congress Complaint Against BS Yeddyurappa
Highlights

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೇ 28ರಂದು ಕಾನೂನು ಬಾಹಿರವಾಗಿ ‘ಕರ್ನಾಟಕ ಬಂದ್‌ಗೆ’ ಕರೆ ನೀಡುವ ಮೂಲಕ ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಬಂದ್ ವಾಪಸು ಪಡೆಯುವಂತೆ ಮಾಡಬೇಕು ಎಂದು ಕೆಪಿಸಿಸಿ ಕಾನೂನು ಘಟಕ ದೂರು ನೀಡಿದೆ. 

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೇ 28ರಂದು ಕಾನೂನು ಬಾಹಿರವಾಗಿ ‘ಕರ್ನಾಟಕ ಬಂದ್‌ಗೆ’ ಕರೆ ನೀಡುವ ಮೂಲಕ ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಬಂದ್ ವಾಪಸು ಪಡೆಯುವಂತೆ ಮಾಡಬೇಕು ಎಂದು ಕೆಪಿಸಿಸಿ ಕಾನೂನು ಘಟಕ ದೂರು ನೀಡಿದೆ. 

ಈ ಬಗ್ಗೆ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ಸಲ್ಲಿಸಿರುವ ಕಾನೂನು ಘಟಕದ ಕಾರ್ಯದರ್ಶಿ ಸೂರ್ಯ ಮುಕುಂದರಾಜ್, ರೈತರ ಸಾಲ ಮನ್ನಾ ಮಾಡದಿದ್ದರೆ ಬಂದ್ ಮಾಡುವುದಾಗಿ ಯಡಿಯೂರಪ್ಪ ಕರೆ ನೀಡಿದ್ದಾರೆ. ಆದರೆ ಕೇರಳದ ಪ್ರಕರಣವೊಂದರಲ್ಲಿ ಸುಪ್ರೀಂಕೋರ್ಟ್ ಬಂದ್ ಮಾಡುವುದು ಕಾನೂನುಬಾಹಿರ ಎಂದು ಸ್ಪಷ್ಟಪಡಿಸಿದೆ ಎಂದಿದ್ದಾರೆ. 

loader