ಬೆಂಗಳೂರು, [ಮೇ.15]: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ರಾಜ್ಯ ಕಾಂಗ್ರೆಸ್​ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. 

ಮಾಜಿ ಮುಖ್ಯಮಂತ್ರಿ ‘ವೀರೇಂದ್ರ ಪಾಟೀಲರಿಗೆ ಅವಮಾನಿಸಿದ ಕಾಂಗ್ರೆಸ್ ಪಕ್ಷಕ್ಕೆ ಲಿಂಗಾಯತರು ಮತ ನೀಡಿದರೆ ಅಪರಾಧ ಮಾಡಿದಂತೆ’ ಎಂಬ ಬಿ.ಎಸ್‌ ಯಡಿಯೂರಪ್ಪ ಹೇಳಿಕೆ ಲಿಂಗಾಯತ ಸಮುದಾಯವನ್ನ ಪ್ರಚೋದಿಸುವಂತಿದೆ ಎಂದು ಆರೋಪಿಸಿ ಕಾಂಗ್ರೆಸ್​ ದೂರು ನೀಡಿದೆ. 

ಕೆಪಿಸಿಸಿ ಕಾರ್ಯದರ್ಶಿ ಎ.ಎನ್.ನಟರಾಜ್​ಗೌಡ, ತುಮಕೂರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಅದ್ದೆ, ಕೆಪಿಸಿಸಿ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರರಾವ್, ಇಂದು [ಬುಧವಾರ] ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. 

ಸಮುದಾಯವನ್ನ ಪ್ರಚೋದಿಸುವ ಹೇಳಿಕೆ ನೀಡಿದ್ದಾರೆ. ಬಿಎಸ್‌ವೈ ಜಾತಿಯಾಧಾರಿತ ಪ್ರವೋಕ್ ಮಾಡಿದ್ದಾರೆ. ಇದೊಂದು ಸಂವಿಧಾನ ವಿರೋಧಿ ನಿಲುವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನ ಉಲ್ಲಂಘಿಸಿದಂತಾಗಿದೆ. ಹೀಗಾಗಿ ಬಿಎಸ್ ವೈ ವಿರುದ್ಧ ಕ್ರಮ ಜರುಗಿಸಬೇಕೆಂದು ಕಾಂಗ್ರೆಸ್ ದೂರಿನಲ್ಲಿ ಉಲ್ಲೇಖಿಸಿದೆ.