ಪರಮಾಣು ಶಸ್ತ್ರಾಸ್ತ್ರ ಭಾರತ ಸರ್ಕಾರ ತನ್ನ ನೀತಿಯನ್ನು ಬದಲಿಸಿದೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಪ್ರಧಾನಮಂತ್ರಿ ನರೇದ್ರ ಮೋದಿಯವರು ಹಾಗೂ ಕೇಂದ್ರ ಸರ್ಕಾರ ಕೂಡಲೇ ಸ್ಪಷ್ಟನೆ ನೀಡಬೇಕಿದೆ, ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಪಣಜಿ (ನ.12): ಭಾರತ ಪರಮಾಣು ಶಸ್ತ್ರಾಸ್ತ್ರಗಳನ್ನು ಮೊದಲು ಬಳಸುವುದಿಲ್ಲ ಎನ್ನುವುದು ಯಾಕೆ? ಎಂದು ಪ್ರಶ್ನಿಸಿದ್ದ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ಹೇಳಿಕೆ ಕುರಿತಂತೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.
ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು, ಪರಮಾಣು ಶಸ್ತ್ರಾಸ್ತ್ರ ಕುರಿತಂತೆ ಮನೋಹರ್ ಪರಿಕ್ಕರ್ ಅವರು ನೀಡಿದ್ದ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಗಾಂಧೀಜಿಯವರ ಅಹಿಂಸಾತ್ಮಕ ತತ್ತ್ವವನ್ನು ಅನುಸರಿಸುವ ಭೂಮಿ ನಮ್ಮದು. ಪರಮಾಣು ಶಸ್ತ್ರಾಸ್ತ್ರ ಕುರಿತಂತೆ ನಿರಸ್ತ್ರೀಕರಣ ನೀತಿಯನ್ನು ನಾವು ನಂಬುತ್ತೇವೆಂದು ಹೇಳಿದ್ದಾರೆ.
ಪರಮಾಣು ಶಸ್ತ್ರಾಸ್ತ್ರ ಭಾರತ ಸರ್ಕಾರ ತನ್ನ ನೀತಿಯನ್ನು ಬದಲಿಸಿದೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಪ್ರಧಾನಮಂತ್ರಿ ನರೇದ್ರ ಮೋದಿಯವರು ಹಾಗೂ ಕೇಂದ್ರ ಸರ್ಕಾರ ಕೂಡಲೇ ಸ್ಪಷ್ಟನೆ ನೀಡಬೇಕಿದೆ, ಎಂದು ಸಿಂಗ್ ಹೇಳಿದ್ದಾರೆ.
ಇಂತಹ ಹೇಳಿಕೆಗಳನ್ನು ಸಂಸ್ಕಾರಯುತ ಆರ್'ಎಸ್ಎಸ್ ನಿಂದ ಮಾತ್ರ ನೀಡಲು ಸಾಧ್ಯ. ಯುಪಿಎ ಅಧಿಕಾರಾವಧಿಯಲ್ಲಿಯೂ ಸೀಮಿತ ದಾಳಿಯನ್ನು ನಡೆಸಲಾಗಿತ್ತು. ಆದರೆ, ಈ ವಿಚಾರವನ್ನು ನಾವು ರಾಜಕೀಯ ಮಾಡಿರಲಿಲ್ಲ. ಎಂದು ಸಿಂಗ್ ಹೇಳಿದ್ದಾರೆ.
