ಹಾಲಿ ಮೇಯರ್ ಜಿ. ಪದ್ಮಾವತಿ ಹಾಗೂ ಉಪ ಮೇಯರ್ ಎಂ. ಆನಂದ್ ಅವರ ಅವಧಿ ಈ ತಿಂಗಳು ಮುಕ್ತಾಯವಾಗಲಿದ್ದು, ಸೆ.28ರಂದು ಚುನಾವಣೆ ನಡೆಯಲಿದೆ.

ಬೆಂಗಳೂರು(ಸೆ.15): ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್​​ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಜತೆಗಿನ ಮೈತ್ರಿ ಮುಂದುವರಿಸಲು ತೀರ್ಮಾನಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಈಗಾಗಲೇ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರ ಜೊತೆ ಸಚಿವ ರಾಮಲಿಂಗಾರೆಡ್ಡಿ ಚರ್ಚಿಸಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಬಗ್ಗೆ ಇನ್ನೂ ಚರ್ಚೆ ನಡೆಸಿಲ್ಲ. ಮುಂದೆ ಮೇಯರ್ ಅಭ್ಯರ್ಥಿಯ ಆಯ್ಕೆ ಬಗ್ಗೆ ಚರ್ಚಿಸುತ್ತೇವೆ. ಜೆಡಿಎಸ್ ಕೂಡ‌‌ ನಮ್ಮ ಜತೆ‌ ಮೈತ್ರಿ ಮುಂದುವರಿಸುವ ಆಸಕ್ತಿ ಹೊಂದಿದೆ ಎಂದು ಹೇಳಿದ್ದಾರೆ.

ಹಾಲಿ ಮೇಯರ್ ಜಿ. ಪದ್ಮಾವತಿ ಹಾಗೂ ಉಪ ಮೇಯರ್ ಎಂ. ಆನಂದ್ ಅವರ ಅವಧಿ ಈ ತಿಂಗಳು ಮುಕ್ತಾಯವಾಗಲಿದ್ದು, ಸೆ.28ರಂದು ಚುನಾವಣೆ ನಡೆಯಲಿದೆ.