ಅಫ್ಜಲ್‌ಪುರ ಕಾಂಗ್ರೆಸ್‌ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲೀಕಯ್ಯ ಗುತ್ತೆದಾರ್‌ ಅವರನ್ನು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಆದೇಶಿಸಿದ್ದಾರೆ.

ಬೆಂಗಳೂರು : ಅಫ್ಜಲ್‌ಪುರ ಕಾಂಗ್ರೆಸ್‌ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲೀಕಯ್ಯ ಗುತ್ತೆದಾರ್‌ ಅವರನ್ನು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಆದೇಶಿಸಿದ್ದಾರೆ.

ಗುರುವಾರ ಜೆಡಿಎಸ್‌ ಹಾಗೂ ಬಿಜೆಪಿ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದ ಮಾಲೀಕಯ್ಯ ಗುತ್ತೆದಾರ್‌ ಅವರು ಪಕ್ಷದ ನಾಯಕರ ವಿರುದ್ಧವಾಗಿ ಹೇಳಿಕೆ ನೀಡಿದ್ದರು. ಪಕ್ಷ ತೊರೆಯುವ ಬಗ್ಗೆ ಹಾಗೂ ಪಕ್ಷದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಪರಮೇಶ್ವರ್‌ ಆದೇಶ ಹೊರಡಿಸಿದ್ದಾರೆ.