ಭೋಪಾಲ್ [ಜು.3] :  ಲೋಕಭಾ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಒಂದು ಸ್ಥಾನವನ್ನೂ ಗೆಲ್ಲಲು ವಿಫಲವಾಗಿದ್ದ ಕಾಂಗ್ರೆಸ್ ಇದೀಗ ಭರ್ಜರಿ ಗೆಲುವು ದಾಖಲಿಸಿದೆ.

ರಾಜಸ್ಥಾನ ಪಂಚಾಯತ್, ಜಿಲ್ಲಾ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ದಾಖಲಿಸಿದೆ. ಒಟ್ಟು 26 ಜಿಲ್ಲೆಗಳಲ್ಲಿ ನಡೆದ ಪಂಚಾಯತ್ ಸಮಿತಿ ಹಾಗೂ ಜಿಲ್ಲಾ ಪರಿಷತ್ ಉಪ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿಜಯಗಳಿಸಿದೆ.

 ಜೂನ್ 30 ರಂದು ಚುನಾವಣೆ ನಡೆದಿದ್ದು  ಕಾಂಗ್ರೆಸ್ 74 ಪಂಚಾಯತ್ ಸಮಿತಿ ಸ್ಥಾನಗಳಲ್ಲಿ 39 ಸ್ಥಾನದಲ್ಲಿ ಗೆದ್ದರೆ, ಬಿಜೆಪಿ 29 ಸ್ಥಾನದಲ್ಲಿ ಜಯಗಳಿಸಿದೆ. ಒಟ್ಟು 6 ಸ್ಥಾನಗಳಲ್ಲಿ ಪಕ್ಷೇತರರು ಜಯ ಸಾಧಿಸಿದ್ದಾರೆ.  8 ಕಾಂಗ್ರೆಸಿಗರು  ಇಬ್ಬರು ಬಿಜೆಪಿಗರು , ಐವರು ಪಕ್ಷೇತರರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇನ್ನು ಜಿಲ್ಲಾ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ 7, ಬಿಜೆಪಿ ಒಂದು ಸ್ಥಾನದಲ್ಲಿ ಗೆಲುವು ಪಡೆಯಲು ಯಶಸ್ವಿಯಾಗಿದೆ. ಇನ್ನೊಂದು ಸ್ಥಾನ ಪಕ್ಷೇತರರ ಪಾಲಾಗಿದೆ. 

ಕಾಂಗ್ರೆಸ್ ಗೆಲುವಿಗೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹರ್ಷಸಿದ್ದು, ಗೆಲುವಿಗಾಗಿ ಶ್ರಮಿಸಿದ ನಾಯಕರಿಗೆ ಧನ್ಯವಾದ ಹೇಳಿದ್ದಾರೆ.