ಬೆಂಗಳೂರು, [ನ.02]: ಬೆಳಗಾವಿ ಗ್ರಾಮೀಣ ಶಾಸಕಿ ಹಾಗೂ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಕಾಂಗ್ರೆಸ್ ಶಾಕ್ ನೀಡಿದೆ.

ರಾಜ್ಯ ಕಾಂಗ್ರೆಸ್ ಮಹಿಳಾ ಘಕದ ಅಧ್ಯಕ್ಷೆ ಸ್ಥಾನದಿಂದ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಕೋಕ್ ನೀಡಲಾಗಿದ್ದು, ನೂತನ ರಾಜ್ಯಾದ್ಯಕ್ಷೆಯನ್ನಾಗಿ ಡಾ.ಬಿ. ಪುಷ್ಪಾ ಅಮರನಾಥ್ ಅವರನ್ನ ನೇಮಕ ಮಾಡಲಾಗಿದೆ.

ಕಾಂಗ್ರೆಸ್ ನಲ್ಲಿ ಒಬ್ಬರಿಗೆ ಒಂದೇ ಹುದ್ದೆ ನಿಯಮದಂತೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ರಾಜ್ಯ ಮಹಿಳಾ ಅಧ್ಯಕ್ಷ ಸ್ಥಾನದಿಂದ ಕೈಬಿಡುವಂತೆ  ಈ ಹಿಂದೆಯೇ ಒತ್ತಾಯಗಳು ಕೇಳಿಬಂದಿದ್ದವು.

ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಹುದ್ದೆಗೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಮುಂಚೂಣಿಯಲ್ಲಿತ್ತು. ಅಷ್ಟೇ ಅಲ್ಲದೇ ನಾಗಲಕ್ಷ್ಮೀ ಚೌಧರಿ ಬೆಂಬಲಿಗರು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿದ್ದರು. ಆದ್ರೆ, ಕೊನೆಗಳಿಗೆಯಲ್ಲಿ ನಾಗಲಕ್ಷ್ಮೀ ಚೌಧರಿ ಅವರಿಗೆ ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಕೈತಪ್ಪಿದೆ.