ಕಾಂಗ್ರೆಸ್ ಗೆ ಇನ್ನೂ 6 ಮಂತ್ರಿಗಿರಿ

Congress Get 6 More Ministerial Post
Highlights

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕ ರೊಂದಿಗೆ ಪಕ್ಷದ ಹೈಕಮಾಂಡ್ ಚರ್ಚಿಸಿ ಅವರನ್ನು ಸಮಾಧಾನ ಪಡಿಸಲಿದೆ. ಅಲ್ಲದೇ ಇನ್ನೂ 6ಮಂತ್ರಿ ಸ್ಥಾನಗಳನ್ನು ತುಂಬಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಪರಮೇಶ್ವರ್ ಹೇಳಿದ್ದಾರೆ. 

ಬೆಂಗಳೂರು :  ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕ ರೊಂದಿಗೆ ಪಕ್ಷದ ಹೈಕಮಾಂಡ್ ಚರ್ಚಿಸಿ ಅವರನ್ನು ಸಮಾಧಾನ ಪಡಿಸಲಿದೆ. ಸಚಿವ ಸ್ಥಾನ ಸಿಗದ ಶಾಸಕರು ಆತಂಕ ಪಡಬೇಕಿಲ್ಲ. ಕಾಂಗ್ರೆಸ್ ಪಾಲಿನ ಇನ್ನೂ ಆರು ಸಚಿವ ಸ್ಥಾನಗಳು ಖಾಲಿ ಇವೆ. ಜತೆಗೆ ನಿಗಮ ಮಂಡಳಿಗಳಲ್ಲಿ ಸೂಕ್ತ ಅವಕಾಶ ಕಲ್ಪಿಸಲಾ ಗುವುದು ಎಂದು ಉಪಮುಖ್ಯಮಂತ್ರಿ ಡಾ| ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ.

ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಎಲ್ಲರಿಗೂ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ. ಶಾಸಕರ ಅಸಮಾಧಾನ ಕುರಿತು ಪಕ್ಷ ಮೊದಲೇ ನಿರೀಕ್ಷೆ ಮಾಡಿತ್ತು. ಸಚಿವ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ ಪಕ್ಷದ ಅನೇಕ ಶಾಸಕರಿಗೆ ಅವಕಾಶ ಕಲ್ಪಿಸಲು ಆಗಲಿಲ್ಲ. ಶಾಸಕರ ಅಸಮಾಧಾನ ಶಮನ ಮಾಡಲು ಪಕ್ಷದ ಮುಖಂಡರು ಹಾಗೂ ಹೈಕ ಮಾಂಡ್ ಪ್ರಯತ್ನಿಸಲಿದೆ. ಪಕ್ಷದಲ್ಲಿ ಪ್ರತಿ ಯೊಬ್ಬರಿಗೂ ಒಂದೊಂದು ಜವಾಬ್ದಾರಿ ಇದೆ. ಯಾವುದೇ ಗೊಂದಲಕ್ಕೆ ಅವಕಾಶ ವಿಲ್ಲದಂತೆ ಅತೃಪ್ತರೊಂದಿಗೆ ಮಾತುಕತೆ ನಡೆಸಿ ಎಲ್ಲವನ್ನೂ ನಿಭಾಯಿಸಲಾ ಗುವುದು. 

ಅದಕ್ಕಾಗಿಯೇ ಇನ್ನೂ ಆರು ಸಚಿವ ಸ್ಥಾನಗಳನ್ನು ಕಾಂಗ್ರೆಸ್ ಪಕ್ಷದಿಂದ ಹಾಗೆಯೇ ಇಟ್ಟಿದ್ದೇವೆ. ಸೂಕ್ತ ಸಂದರ್ಭ ದಲ್ಲಿ ನಿರ್ಣಯ ಕೈಗೊಳ್ಳುತ್ತೇವೆ ಎಂದರು. ಒಂದೇ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದಾಗಲೂ ಅಸಮಾಧಾನ ಇರುತ್ತದೆ. ಈಗ ಸಮ್ಮಿಶ್ರ ಸರ್ಕಾರದಲ್ಲಿ ಅದು ಸ್ವಲ್ಪ ಹೆಚ್ಚಿರಬಹುದು. ಆದರೆ ಆತಂಕ ಪಡುವ ಅಗತ್ಯವಿಲ್ಲ. ಪಕ್ಷದಲ್ಲಿ 80 ಜನರಿದ್ದು, ಬಹಳ ಜನರಿಗೆ ಸಚಿವ ಸ್ಥಾನ ಸಿಗಬೇಕಿತ್ತು. ಅವರೆಲ್ಲರಿಗೂ ಸಚಿವರಾಗುವ ಅರ್ಹತೆ ಇದೆ. ಆದರೆ, ನಮಗೆ ಕೊಡಲು ಸಾಧ್ಯವಾಗಿದ್ದು ಕೇವಲ 22 ಸಚಿವ ಸ್ಥಾನಗಳು ಮಾತ್ರ.

ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಿಗದವರಿಗೂ ಒಳ್ಳೆಯ ಅವಕಾಶಗಳು ಸಿಗಲಿವೆ. ಹಾಗಾಗಿ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು. ಎಲ್ಲ ಸಚಿವರು ತಮ್ಮ ಜಿಲ್ಲೆ, ಇಲಾಖೆಗಳಲ್ಲಿ ಸಮರ್ಪಕ ವಾಗಿ ಕೆಲಸ ಮಾಡುವಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿದ್ದೇವೆ. ಯಾವುದೇ ಗೊಂದಲಕ್ಕೆ ಅವಕಾಶ ಆಗದಂತೆ ಆಡಳಿತ ನಡೆಸುತ್ತೇವೆ. ಇಂಧನ ಖಾತೆ ಬಗ್ಗೆ ಯಾವುದೇ ಗೊಂದಲ ಇಲ್ಲ. ಪಕ್ಷದ ಅಧ್ಯಕ್ಷನಾಗಿ ಎಲ್ಲರ ಗೊಂದಲ ಪರಿಹರಿಸುತ್ತೇನೆ. ಐದು ವರ್ಷಗಳ ಕಾಲ ಸರ್ಕಾರ ನಡೆಸುತ್ತೇವೆ. ಗುರುವಾರದೊಳಗೆ ಖಾತೆಗಳನ್ನು ಮುಖ್ಯಮಂತ್ರಿ ಅವರು ಹಂಚಿಕೆ ಮಾಡಲಿದ್ದಾರೆ ಎಂದು ತಿಳಿಸಿದರು.

loader