ಸರ್ವಜ್ಞ ನಗರ ಕ್ಷೇತ್ರದಲ್ಲಿ ಬಿಗಿ ಹಿಡಿತ ಹೊಂದಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಕಾಂಗ್ರೆಸ್‌ನಿಂದ ಏಕಮೇವ ಆಕಾಂಕ್ಷಿ.
ಬೆಂಗಳೂರು : ಸರ್ವಜ್ಞ ನಗರ ಕ್ಷೇತ್ರದಲ್ಲಿ ಬಿಗಿ ಹಿಡಿತ ಹೊಂದಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಕಾಂಗ್ರೆಸ್ನಿಂದ ಏಕಮೇವ ಆಕಾಂಕ್ಷಿ.
ಹೀಗಾಗಿ ಅವರೇ ಈ ಬಾರಿಯೂ ಅಭ್ಯರ್ಥಿಯಾಗಲಿದ್ದಾರೆ. ಜಾರ್ಜ್ ಕೋಟೆ ಒಡೆಯುವುದು ಬಿಜೆಪಿ ಮತ್ತು ಜೆಡಿಎಸ್ಗೆ ದುಸ್ತರದ ಕೆಲಸವೇ ಸರಿ. ಜಾರ್ಜ್ ವಿರುದ್ಧ ಬಿಜೆಪಿ ಅನೇಕ ಆರೋಪಗಳನ್ನು ಹೊರಿಸಿದರೂ ಅವುಗಳನ್ನು ಸಾಬೀತುಪಡಿಸಲು ಸಾಧ್ಯವಾಗಿಲ್ಲ.
ಮೇಲಾಗಿ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತದಾರರು ನಿರ್ಣಾಯಕ ಸ್ಥಾನದಲ್ಲಿ ರುವುದರಿಂದ ಜಾರ್ಜ್
ಕೋಟೆಯನ್ನು ಹೇಗೆ ಒಡೆಯುವುದು ಎಂಬ ಚಿಂತೆ ಬಿಜೆಪಿಯನ್ನು ಕಾಡುತ್ತಿದೆ.
ಕಳೆದ ಬಾರಿ ಸ್ಪರ್ಧಿಸಿ ಸೋಲುಂಡಿದ್ದ ಹಾಲಿ ಬಿಬಿಎಂಪಿ ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ಅವರಿಗೆ ಟಿಕೆಟ್ ಲಭಿಸುವ ಸಾಧ್ಯತೆ ಹೆಚ್ಚಾಗಿದೆ.
ಜತೆಗೆ ಬಿಬಿಎಂಪಿಯ ಮಾಜಿ ಸದಸ್ಯ ಗೋವಿಂದರಾಜು ಅವರೂ ಆಕಾಂಕ್ಷಿಯಾಗಿದ್ದಾರೆ. ಜೆಡಿಎಸ್ನಿಂದ ಅನ್ವರ್ ಶರೀಫ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ.
