ಹಿಮಾಚಲ ಪ್ರದೇಶದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರಾ, ಹಿ.ಪ್ರ: ಹಿಮಾಚಲ ಪ್ರದೇಶದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರಾ ಜಿಲ್ಲೆಯ ರೆಹಾನ್ ಎಂಬಲ್ಲಿ ಸಾಂಪ್ರದಾಯಿಕ ಹಿಮಾಚಲ ಟೊಪ್ಪಿಯನ್ನು ಧರಿಸಿ ಸಾರ್ವಜನಿರನ್ನುದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್ ಒಂದು ಹಾಸ್ಯಕೂಟವಾಗಿ ಬಿಟ್ಟಿದೆ ಎಂದು ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ಒಂದು ಹಾಸ್ಯದ ಕ್ಲಬ್ ಆಗಿದೆ. ಮುಖ್ಯಮಂತ್ರಿ ವಿರುದ್ಧ ಭ್ರಷ್ಟಾಚಾರದ ಆರೋಪಗಳಿವೆ. ಆದರೆ ಅವರು ಜಾಮೀನು ಪಡೆದು ಹೊರಗಿದ್ದಾರೆ. ಸಾಲದು ಎಂಬಂತೆ, ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವುದಾಗಿ ಗೋಷಿಸಿಕೊಂಡಿದ್ದಾರೆ, ಎಂದು ಮೋದಿ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಆಡಳಿತದಲ್ಲಿ, ಅರಣ್ಯ, ಗಣಿ, ಟೆಂಡರ್, ವರ್ಗಾವಣೆ ಹಾಗೂ ಡ್ರಗ್ಸ್ ಎಂಬ 5 ರೀತಿಯ ಮಾಫಿಯಾಗಳು ರಾಜ್ಯವನ್ನು ಕೊಳ್ಳೆಹೊಡೆದಿವೆ ಎಂದು ಮೋದಿ ಈ ಸಂದರ್ಭದಲ್ಲಿ ಹೇಳಿದರು.
