ಮೊಯ್ಲಿ ಟ್ವೀಟ್‌: ಪರಂರಿಂದ ವಿವರಣೆ ಕೇಳಿದ ಹೈಕಮಾಂಡ್‌

First Published 18, Mar 2018, 7:42 AM IST
Congress High Command Ask Report About Moily Tweet
Highlights

ಪಕ್ಷದ ಹಿರಿಯ ಮುಖಂಡ ವೀರಪ್ಪ ಮೊಯ್ಲಿ ಅವರ ಟ್ವೀಟ್‌ ಅವಾಂತರಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ನವದೆಹಲಿ : ಪಕ್ಷದ ಹಿರಿಯ ಮುಖಂಡ ವೀರಪ್ಪ ಮೊಯ್ಲಿ ಅವರ ಟ್ವೀಟ್‌ ಅವಾಂತರಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ರಾಜ್ಯ ಕಾಂಗ್ರೆಸ್‌ನ ಉಸ್ತುವಾರಿ ಕೆ.ಸಿ. ವೇಣುಗೋಪಾಲ ಅವರು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಅವರನ್ನು ಕರೆಸಿಕೊಂಡು ಪ್ರಕರಣದ ಬಗ್ಗೆ ವಿವರಣೆ ಪಡೆದಿದ್ದಾರೆ.

ಮೊಯ್ಲಿ ಬಗ್ಗೆ ಕ್ರಮ ಕೈಗೊಳ್ಳಬೇಕೇ, ಬೇಡವೇ ಎಂಬ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ಪರಿಶೀಲನೆ ನಡೆಸುತ್ತಿದೆ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ.

ರಾಜ್ಯ ಕಾಂಗ್ರೆಸ್‌ ನಾಯಕರು ಮೊಯ್ಲಿ ಅವರಿಂದ ವಿವರಣೆಯನ್ನು ಕೇಳಿಲ್ಲ ಎಂದು ಸಮಜಾಯಿಷಿ ನೀಡುವ ಪ್ರಯತ್ನ ನಡೆಸಿದ್ದರೂ ಮೊಯ್ಲಿ ಹೇಳಿಕೆ ಕಾಂಗ್ರೆಸ್‌ ಹೈಕಮಾಂಡ್‌ನಲ್ಲಿ ಕಸಿವಿಸಿ ಉಂಟು ಮಾಡಿದೆ.

loader