ಕರ್ನಾಟಕ ಸಂಪುಟದಲ್ಲಿ ಯಾರು ಇರಬೇಕು, ಯಾರು ಇರಬಾರದು ಎನ್ನುವ ಬಗ್ಗೆ ಹೈ ಕಮಾಂಡ್ ನಿರ್ಧಾರ ಮಾಡಲಿದೆ ಎಂದು ಕಂದಾಯ ಸಚಿವ ಆರ್. ವಿ. ದೇಶಪಾಂಡೆ ಹೇಳಿದ್ದಾರೆ
ಸುವರ್ಣ ವಿಧಾನಸೌಧ: ಸಮ್ಮಿಶ್ರ ಸರ್ಕಾರದ ಶಾಸಕರಲ್ಲಿ ಯಾವುದೇ ಒತ್ತಡ ಇಲ್ಲ. ಸಚಿವ ಸಂಪುಟ ವಿಸ್ತರಣೆ ವೇಳೆ ಯಾರು ಇರಬೇಕು, ಯಾರು ಇರಬಾರದು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದರು.
ಸೋಮವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ವೇಳೆ ಕೆಲವರನ್ನು ಸಂಪುಟದಿಂದ ಕೈಬಿಟ್ಟರೆ ಏನು ಮಾಡುವುದಕ್ಕೆ ಆಗುತ್ತದೆ? ಈ ಬಗ್ಗೆ ತಲೆಕೆಡಿಸಿಕೊಳ್ಳುವುದು ಏನಿಲ್ಲ.
ಸಂಪುಟದಲ್ಲಿ ಹೊಸ ರಕ್ತ, ಹಳೆಯ ರಕ್ತ ಎರಡೂ ಇರಲಿ ಬಿಡಿ. ಇದು ಒಳ್ಳೆಯ ಬೆಳವಣಿಗೆ ಎಂದರು. ಜೆಡಿಎಸ್‌ನವರು ಕಾಂಗ್ರೆಸ್ ಮೇಲೆ ಸವಾರಿ ಮಾಡುತ್ತಿದ್ದಾರೆ ಎಂಬ ಆರೋಪ ಸತ್ಯಕ್ಕೆ ದೂರವಾದದ್ದು ಎಂದರು.
