ಕೈಗೂಡದ ಅಂಕಿ ಆಟ: ಅಭ್ಯರ್ಥಿಯನ್ನು ಕಣಕ್ಕಿಳಿಸದ ಬಿಜೆಪಿ | ವೇಣು, ನಜೀರ್, ರಮೇಶ್‌ಗೌಡ ಪರಿಷತ್‌ಗೆ ಆಯ್ಕೆ ಖಚಿತ

ಬೆಂಗಳೂರು (ಸೆ. 25): ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ನಾಮಪತ್ರ ಸಲ್ಲಿಸಿ ಕಣಕ್ಕಿಳಿಸಲು ಎಲ್ಲಾ ರೀತಿಯಲ್ಲಿಯೂ ಸಿದ್ಧತೆ ನಡೆಸಿದರೂ ಅಂತಿಮ ಕ್ಷಣದಲ್ಲಿ ಸ್ಪರ್ಧಾಕಣದಿಂದ ಬಿಜೆಪಿ ದೂರ ಉಳಿದ ಹಿನ್ನೆಲೆಯಲ್ಲಿ ವಿಧಾನ
ಪರಿಷತ್‌ಗೆ ಅ.೪ಕ್ಕೆ ನಡೆಯಬೇಕಿದ್ದ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಮೂವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಸೋಲು ಖಚಿತ ಎಂಬುದನ್ನು ಮನಗಂಡ ಬಿಜೆಪಿ ಕೊನೆ ಕ್ಷಣದಲ್ಲಿ ತನ್ನ ಅಭ್ಯರ್ಥಿಗಳನ್ನು ಹಾಕದೆ ಕಣದಿಂದ ಹಿಂದೆ ಸರಿದಿದೆ. ಹೀಗಾಗಿ ಕಾಂಗ್ರೆಸ್ ಇಬ್ಬರು ಅಭ್ಯರ್ಥಿಗಳ ಮತ್ತು ಜೆಡಿಎಸ್‌ನ ಒಬ್ಬ ಅಭ್ಯರ್ಥಿ ಅವಿರೋಧ ಆಯ್ಕೆಯಾಗುವುದು ನಿಚ್ಚಳವಾಗಿದೆ.