ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಫೈನಲ್..!

First Published 7, Mar 2018, 11:56 AM IST
Congress JDS CAndidates Final
Highlights

ಕಾಂಗ್ರೆಸ್ಸಿನ ಹಾಲಿ ಶಾಸಕ ಟಿ. ವೆಂಕಟರಮಣಯ್ಯ ಮತ್ತೆ ಸ್ಪರ್ಧಿಸಲಿದ್ದಾರೆ. ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪುತ್ರರೂ ಆಗಿರುವ ಮಾಜಿ ಶಾಸಕ ಜೆ. ನರಸಿಂಹಸ್ವಾಮಿ ಅವರು ಮತ್ತೆ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆಯಿದೆ.

ದೊಡ್ಡಬಳ್ಳಾಪುರ : ಕಾಂಗ್ರೆಸ್ಸಿನ ಹಾಲಿ ಶಾಸಕ ಟಿ. ವೆಂಕಟರಮಣಯ್ಯ ಮತ್ತೆ ಸ್ಪರ್ಧಿಸಲಿದ್ದಾರೆ. ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪುತ್ರರೂ ಆಗಿರುವ ಮಾಜಿ ಶಾಸಕ ಜೆ. ನರಸಿಂಹಸ್ವಾಮಿ ಅವರು ಮತ್ತೆ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆಯಿದೆ.

ಜತೆಗೆ ಪರ್ಯಾಯ ಸಮರ್ಥ ಅಭ್ಯರ್ಥಿಗಾಗಿ ಹುಡುಕಾಟವನ್ನೂ ನಡೆಸಲಾಗುತ್ತಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆ ತೀರಾ ಪ್ರಬಲವಾಗಿಯೇನೂ ಇಲ್ಲ. ಆಪರೇಷನ್ ಕಮಲದ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿನಿಂದ ಬಿಜೆಪಿಗೆ ವಲಸೆ ಬಂದಿದ್ದ ನರಸಿಂಹಸ್ವಾಮಿ ಅವರಿಂದಾಗಿ ಪಕ್ಷದ ಸಂಘಟನೆ ಬೆಳೆದಿತ್ತು.

ಆದರೆ, ಈಗ ನರಸಿಂಹಸ್ವಾಮಿ ಪಕ್ಷದಲ್ಲಿ ಕ್ರಿಯಾಶೀಲವಾಗಿಲ್ಲ. ಕಳೆದ ಬಾರಿ ಜೆಡಿಎಸ್‌ಗೆ ಸಡ್ಡು ಹೊಡೆದು ಪಕ್ಷೇತರರಾಗಿ ಸ್ಪರ್ಧಿಸಿ, ಎರಡನೇ ಸ್ಥಾನ ಪಡೆದಿದ್ದ ಮುನೇಗೌಡ ಅವರಿಗೆ ಈ ಬಾರಿ ಜೆಡಿಎಸ್‌ನಿಂದಲೇ ಟಿಕೆಟ್ ಘೋಷಿಸಲಾಗಿದೆ. ಕ್ಷೇತ್ರದಲ್ಲಿ ಜೆಡಿಎಸ್ ಸಂಘಟನೆ ಕೂಡ ಬಲವಾಗಿದೆ.

loader