ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಘೋಷಣೆಯಾಗಿದೆ. ಮೈತ್ರಿ ಬಗ್ಗೆ ಕಾಂಗ್ರೆಸ್‌ನಲ್ಲಿ ಯಾರಿಗೂ ಅಸಮಾಧಾನ ಇಲ್ಲ. ಗೊಂದಲಗಳಿದ್ದರೂ ಚರ್ಚಿಸಿ ಬಗೆಹರಿಸಿಕೊ ಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

ಶುಕ್ರವಾರ ಕೆಪಿಸಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಚುನಾವಣಾ ಪೂರ್ವ ಮೈತ್ರಿ ಘೋಷಣೆ ಮಾಡಿದ್ದಾರೆ. ಯಾವ ರೀತಿಯಲ್ಲಿ ಮೈತ್ರಿ ಮಾಡಿಕೊಳ್ಳಬೇಕು ಇತ್ಯಾದಿ ವಿಷಯಗಳ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ಮಾಡಲಿದೆ. 

ಕಾಂಗ್ರೆಸ್‌ನ ಕೆಲ ನಾಯಕರಿಗೆ ಚುನಾವಣಾ ಪೂರ್ವ ಮೈತ್ರಿ ಬಗ್ಗೆ ವಿರೋಧವಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಚುನಾವಣೆಯ ದಿನಾಂಕವೇ ಘೋಷಣೆಯಾಗಿಲ್ಲ. ಇವೆಲ್ಲಾ ಆಧಾರರಹಿತ ಆರೋಪ ಎಂದು ಹೇಳಿದರು. ಮುಖ್ಯಮಂತ್ರಿ ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಹಾಗೂ ಸಿದ್ದರಾಮಯ್ಯ ಅವರು ಎಲ್ಲಾ ವಿಚಾರಗಳನ್ನು ಚರ್ಚೆ ಮಾಡಿಯೇ ಅಂತಿಮ ನಿರ್ಧಾರಕ್ಕೆ ಬಂದಿದ್ದಾರೆ ಎಂದರು.