ಅತೃಪ್ತರಾಗಿ ತೆರಳಿರುವ ಮೈತ್ರಿ ಶಾಸಕರನ್ನು ವಾಪಸ್ ಕರತರಲು ಕಾಂಗ್ರೆಸ್ -ಜೆಡಿಎಸ್ ಪ್ಲಾನ್ ಮಾಡುತ್ತಿದೆ. ಇದರಿಂದಲೇ ಸದನದಲ್ಲಿ ತಂತ್ರ ರೂಪಿಸುತ್ತಿದೆ ಎನ್ನಲಾಗಿದೆ.
ಬೆಂಗಳೂರು [ಜು.18] : ರಾಜ್ಯ ಸರ್ಕಾರಕ್ಕೆ ಅಳಿವು ಉಳಿವಿನ ಪ್ರಶ್ನೆಯಾಗಿರುವ ವಿಶ್ವಾಸ ಮತ ಯಾಚನೆಗೆ ಮೈತ್ರಿ ನಾಯಕರು ಮುಂದಾಗಿದ್ದಾರೆ. ಆದರೆ ಸದನದಲ್ಲಿ ವಿವಿಧ ರೀತಿಯ ಚರ್ಚೆಗಳು ನಡೆಯುತ್ತಿದ್ದು, ಉದ್ದೇಶ ಪೂರ್ವಕವಾಗಿ ವಿಳಂಬ ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಮಾತನಾಡಿ, ರಾಜ್ಯಪಾಲರು ಮಧ್ಯ ಪ್ರವೇಶ ಮಾಡಬೇಕು. ಪಕ್ಷಾಂತರ ನಿಷೇಧ ವಿಚಾರ ಸೇರಿದಂತೆ ಅನಗತ್ಯ ವಿಚಾರಗಳ ಬಗ್ಗೆ ಕಾಂಗ್ರೆಸ್ - ಜೆಡಿಎಸ್ ನಾಯಕರು ಚರ್ಚೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಶಾಸಕರ ಸಮಯ ವ್ಯರ್ಥ ಮಾಡುತ್ತಿದ್ದು, ಮುಂಬೈನಲ್ಲಿರುವ ಶಾಸಕರನ್ನು ಕರೆತರಲು ಈ ರೀತಿಯ ಪ್ಲಾನ್ ಮಾಡಲಾಗುತ್ತಿದೆ. ಇಂದು ನಾಳೆ ಸೋಮವಾರವೂ ಹೀಗೆಯೇ ಚರ್ಚೆ ನಡೆಸಲು ಪ್ಲಾನ್ ಮಾಡಿಕೊಂಡಿದ್ದಾರೆ. ವಿಶ್ವಾಸಮತ ಯಾಚನೆ ಪ್ರಕ್ರಿಯೆ ವಿಳಂಬ ಮಾಡಲು ಮೈತ್ರಿ ನಾಯಕರು ತಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
