ಜೆಡಿಎಸ್ - ಕಾಂಗ್ರೆಸ್ ಕಾರ್ಯಕರ್ತರ ಘರ್ಷಣೆ

Congress - JDS Workers Clash In Tumkur
Highlights

ರಾಜ್ಯದಲ್ಲಿ ಜೆಡಿಎಸ್ ಕಾಂಗ್ರೆಸ್ ದೋಸ್ತಿ ಸರ್ಕಾರದ ನಡುವಿನ ಜಟಾಪಟಿ ಸದ್ಯಕ್ಕೆ ತಣ್ಣಗಾಗಿದೆ. ಆದರೆ ತುಮಕೂರಿನ ಕುಣಿಗಲ್ ನಲ್ಲಿ ಉಭಯ ಪಕ್ಷದ ಕಾರ್ಯಕರ್ತರ  ನಡುವೆ  ಕುಸ್ತಿ ಆರಂಭವಾಗಿದೆ. 
 

ತುಮಕೂರು:  ರಾಜ್ಯದಲ್ಲಿ ಜೆಡಿಎಸ್ ಕಾಂಗ್ರೆಸ್ ದೋಸ್ತಿ ಸರ್ಕಾರದ ನಡುವಿನ ಜಟಾಪಟಿ ಸದ್ಯಕ್ಕೆ ತಣ್ಣಗಾಗಿದೆ. ಆದರೆ ತುಮಕೂರಿನ ಕುಣಿಗಲ್ ನಲ್ಲಿ ಉಭಯ ಪಕ್ಷದ ಕಾರ್ಯಕರ್ತರ  ನಡುವೆ  ಕುಸ್ತಿ ಆರಂಭವಾಗಿದೆ. 

ನರೇಗಾ ಯೋಜನೆ ಅವ್ಯವಹಾರ ನಡೆದಿದೆ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಆರೋಪ ಪ್ರತ್ಯಾರೋಪಗಳು ಕೇಳಿ ಬಂದಿವೆ. ಗ್ರಾಮ ಪಂಚಾಯತಿ ಮುಂದೆ ಕೈ ಕೈ ಮಿಲಾಯಿಸುವ ಹಂತಕ್ಕೂ  ಜೆ ಡಿ ಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ತಲುಪಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಬಾಗೇನಹಳ್ಳಿ ಪಂಚಾಯ್ತಿಯಲ್ಲಿ ನಡೆದಿದೆ. 

ಅವ್ಯವಹಾರದಲ್ಲಿ ಕಾಂಗ್ರೆಸ್ ನ ಜಿಲ್ಲಾ ಪಂಚಾಯ್ತಿ ಸದಸ್ಯೆ  ಪದ್ಮ ಪಾಪಣ್ಣ ಕೈವಾಡ ಇದೆ ಎಂದು ಜೆಡಿಎಸ್ ಕಾರ್ಯಕರ್ತರು ಆರೋಪ ಮಾಡಿದ್ದು,  ಇದಕ್ಕೆ  ಜೆಡಿಎಸ್ ಕಾರ್ಯಕರ್ತರು ಅವ್ಯವಹಾರ ನಡೆಸಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತ್ಯಾರೋಪ ಮಾಡಿದ್ದಾರೆ. 

ಆರೋಪ ಪ್ರತ್ಯಾರೋಪ ಬಳಿಕ ಎರಡೂ ಪಕ್ಷದ ಕಾರ್ಯಕರ್ತರು ಗ್ರಾಮ ಪಂಚಾಯ್ತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.

loader