ನವದೆಹಲಿ, (ಸೆ.17):8.5 ಕೋಟಿ ಅಕ್ರಮ ಹಣ ಸಿಕ್ಕ ಪ್ರಕರಣದಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ನಾಳೆಗೆ (ಸೆ.18) ಅಂದ್ರೆ ಬುಧವಾರಕ್ಕೆ ಮುಂದೂಡಿದೆ.

ಅಲ್ಲಿವರೆಗೆ ಆಸ್ಪತ್ರೆಗೆ ದಾಖಲಿಸುವಂತೆ  ED ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಆದೇಶ ಹೊರಡಿಸಿದ್ದಾರೆ.

ಡಿಕೆ ಶಿವಕುಮಾರ್‌ ಪ್ರಕರಣಕ್ಕೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಜಾಮೀನು  ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಬುಧವಾರ ಮಧ್ಯಾಹ್ನ 3 ಗಂಟೆಗೆ ಮುಂದೂಡಿದ್ದು, ಡಿ.ಕೆ.ಶಿವಕುಮಾರ್​ ಅವರು ತಿಹಾರ್ ಜೈಲಿಗೆ ಹೋಗುವುದು ಅನಿವಾರ್ಯವಾಗಿದೆ. ಆದರೆ ಅವರ ಆರೋಗ್ಯ ಹದಗೆಟ್ಟಿರುವುದರಿಂದ ಆಸ್ಪತ್ರೆಗೆ ದಾಖಲಾಗಲಿದ್ದಾರೆ.

 ಇಡಿ ವಿಚಾರಣೆ ಅಂತ್ಯವಾಗಿದ್ದರಿಂದ ಇಂದು (ಮಂಗಳವಾರ) ಡಿಕೆ ಶಿಕುಮಾರ್ ಅವರನ್ನು ರೋಸ್ ಅವೆನ್ಯೂ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.

ಡಿಕೆಶಿ ಪರ ವಕೀಲರಾದ ಅಭಿಷೇಕ್ ಮನು ಸಂಘ್ವಿ ಹಾಗೂ ದಯಾನ್ ಕೃಷ್ಣನ್  ವಾದ  ಮಂಡಿಸಿದರೆ, ಇಡಿ ಪರ ನಟರಾಜನ್ ವಾದ ಮಂಡಿಸಿದರು.

ಈ ವಾದ-ಪ್ರತಿವಾದ ಆಲಿಸಿದ ರೋಸ್ ಅವೆನ್ಯೂ ಕೋರ್ಟ್‌ನ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್, ನಾಳೆ (ಬುಧವಾರಕ್ಕೆ) ಮುಂದೂಡಿದರು.ಅಲ್ಲಿವರೆಗೂ ಡಿಕೆಶಿಯನ್ನು ಆರ್‌ಎಂಎಲ್‌ ಆಸ್ಪತ್ರೆಗೆ ದಾಖಲಿಸುವಂತೆ ಆದೇಶ ನೀಡಿದರು.