ಸಾಲ ಮನ್ನಾಕ್ಕೆ ಕಾಂಗ್ರೆಸ್‌ ನಾಯಕಿ 1 ಲಕ್ಷ ದೇಣಿಗೆ

Congress Leader donates 1 lakh for Loan waive off
Highlights

ಕಾಂಗ್ರೆಸ್-ಜೆಡಿಎಸ್ ಹಗ್ಗ ಜಗ್ಗಾಟದಲ್ಲಿ ಸಾಲ ಮನ್ನಾ ಸಿಕ್ಕಿ ಒದ್ದಾಡುತ್ತಿದೆ. ಸಿಎಂ ಕುಮಾರಸ್ವಾಮಿ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದಾರೆ. ಏತನ್ಮಧ್ಯೆ ಕಾಂಗ್ರೆಸ್ ನಾಯಕಿಯೊಬ್ಬರು 1 ಲಕ್ಷ ದೇಣಿಗೆ ಕೊಡುವುದಾಗಿ ಹೇಳಿದ್ದಾರೆ. 

ಕುಂದಗೋಳ (ಜೂ. 03): ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡಗೇರಿ ಜಿಪಂ ಸದಸ್ಯೆ ಜ್ಯೋತಿ ಶಿವಾನಂದ ಬೆಂತೂರ ಅವರು ರೈತರ ಸಾಲ ಮನ್ನಾಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸರ್ಕಾರದಿಂದ ಸಿಕ್ಕ ಗೌರವ ಧನ 3 ಲಕ್ಷ ರು. ನೀಡಿದ್ದಾರೆ.

ಇದರ ಬೆನ್ನಲ್ಲೇ ತಾಲೂಕು ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ಧೃತಿ ಸಾಲ್ಮನಿ ಸಾಲಮನ್ನಾಕ್ಕಾಗಿ ವೈಯಕ್ತಿಕವಾಗಿ 1 ಲಕ್ಷ ರು. ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡಿದರೆ ಅದು ಸರ್ಕಾರಕ್ಕೆ ಹೊರೆಯಾಗುತ್ತದೆ. ಹೀಗಾಗಿ ಎಲ್ಲರೂ ಸೇರಿ ಸರ್ಕಾರದೊಂದಿಗೆ ಕೈ ಜೋಡಿಸಬೇಕಿದೆ. ಈ ನಿಟ್ಟಿನಲ್ಲಿ ನಾನು ವೈಯಕ್ತಿಕವಾಗಿ ಸರ್ಕಾರಕ್ಕೆ 1 ಲಕ್ಷ ರು. ದೇಣಿಗೆ ನೀಡಲು ನಿರ್ಧರಿಸಿದ್ದು, ಅದನ್ನು ಬುಧವಾರ ಮುಖ್ಯಮಂತ್ರಿಗಳಿಗೆ ನೀಡುತ್ತೇನೆ ಎಂದರು. ಅಲ್ಲದೇ, ಕುಂದಗೋಳ ಎಪಿಎಂಸಿ ನಾಮನಿರ್ದೇಶನ ಸದಸ್ಯಳಾಗಿದ್ದು, ನನಗೆ 4 ವರ್ಷ ಗೌರವಧನ ಬಂದಿದೆ. ಅದನ್ನು ಕೂಡ ರೈತರ ಸಾಲಮನ್ನಾಕ್ಕೆ ಬಳಸಲು ನಿರ್ಧರಿಸಿದ್ದೇನೆ. ಈ ಕುರಿತು ಮುಖ್ಯಮಂತ್ರಿಗಳನ್ನು ಕಂಡು ಚರ್ಚಿಸಿ ನೀಡುತ್ತೇನೆ ಎಂದು ತಿಳಿಸಿದರು.
 

loader