ತುಮಕೂರು [ಜು.22] :  ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎನ್ನುವ ಮೂಲಕ ಮಾಜಿ ಶಾಸಕ ಕೆ.ಎನ್‌. ರಾಜಣ್ಣ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. 

ನಾನು ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದೇ ಈ ರೀತಿ ತೊಂದರೆ ಕೊಡುತ್ತಿದ್ದಾರೆ. ಈಗಾಗಲೇ 69 ವರ್ಷ ವಯಸ್ಸಾಗಿದೆ. ಜನರ ಕೆಲಸ ಮಾಡಲು ಕಷ್ಟವಾಗಬಹುದು. ಅಲ್ಲದೆ ನಾನು ಕೆಳ ಜಾತಿಯಲ್ಲಿ ಹುಟ್ಟಿದ್ದೇನೆ. ಹಾಗಾಗಿ ನನ್ನನ್ನು ತುಳಿಯಲಾಗುತ್ತಿದೆ ಎಂದರು. 

ನಾನು ಹುಟ್ಟಿದ ಜಾತಿ ಬಗ್ಗೆ ನನಗೆ ಹೆಮ್ಮೆ ಇದೆ. ನನ್ನನ್ನು ಸಮರ್ಥಿಸಿಕೊಳ್ಳಲು ಬೇರೆ ಜಾತಿಯಲ್ಲೂ ಸ್ನೇಹಿತರಿದ್ದಾರೆ ಎಂದು ರಾಜಣ್ಣ ಹೇಳಿದರು.