ವೈನಾಡ್(ಜ.30): ಮಹತ್ವದ ಬೆಳವಣಿಗೆಯೊಂದರಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ, ಕೇರಳದ ಕಾಂಗ್ರೆಸ್ ನಾಯಕ ಓಂ ಜಾರ್ಜ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಓಂ ಜಾರ್ಜ್ 17 ವರ್ಷದ ಅಪ್ರಾಪ್ತ ಬಾಲಕಿಗೆ ಎರಡು ವರ್ಷಗಳಿಂದ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಬಾಲಕಿಯ ಪೋಷಕರು ಜಾರ್ಜ್ ಮನೆಯ ಕೆಲಸದಾಳುಗಳಾಗಿದ್ದು, ಎರಡು ವರ್ಷಗಳಿಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಈ ಕುರಿತು ಬಾಲಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಜಾರ್ಜ್ ವಿರುದ್ದ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಇನ್ನು ತನ್ನ ನಾಯಕನ ವಿರುದ್ಧ ಗಂಭೀರ ಆರೋಪ ಕೇಳಿ ಬರುತ್ತಿದ್ದಂತೇ ಜಾರ್ಜ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ.